ತವರಿನಲ್ಲೇ ಪಾಕಿಸ್ತಾನಕ್ಕೆ ಮುಖಭಂಗ: ಬಾಂಗ್ಲಾದೇಶ ಎದುರು 10 ವಿಕೆಟ್ ಸೋಲು, ಇತಿಹಾಸ ಬರೆದ ಬಾಂಗ್ಲಾ ಟೈಗರ್ಸ್!

ರಾವಲ್ಪಿಂಡಿಯಲ್ಲಿ ನಡೆದ ಈ ಟೆಸ್ಟ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಾಕಿಸ್ತಾನ 6 ವಿಕೆಟ್​ಗೆ 448 ರನ್‌ ಗಳಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 565 ರನ್‌ ಪೇರಿಸಿತು. ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಪಾಕಿಸ್ತಾನ ಅಂತಿಮ ದಿನದಾಟದಲ್ಲಿ ಕೇವಲ 146 ರನ್​ಗೆ ಸರ್ವ ಪತನ ಕಂಡಿತು.
Bangladesh Humiliate Pakistan In Their Own Home
ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶಕ್ಕೆ ಜಯ
Updated on

ಇಸ್ಲಾಮಾಬಾದ್: ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ 10 ವಿಕೆಟ್​ಗಳ ಸೋಲು ಕಂಡಿದ್ದು, ಪಾಕ್ ನೆಲದಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡ ಐತಿಹಾಸಿಕ ಗೆಲುವು ಸಾಧಿಸಿದೆ.

ರಾವಲ್ಪಿಂಡಿಯಲ್ಲಿ ನಡೆದ ಈ ಟೆಸ್ಟ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಾಕಿಸ್ತಾನ 6 ವಿಕೆಟ್​ಗೆ 448 ರನ್‌ ಗಳಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 565 ರನ್‌ ಪೇರಿಸಿತು. ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಪಾಕಿಸ್ತಾನ ಅಂತಿಮ ದಿನದಾಟದಲ್ಲಿ ಕೇವಲ 146 ರನ್​ಗೆ ಸರ್ವ ಪತನ ಕಂಡಿತು.

ಗೆಲುವಿಗೆ 28 ರನ್​ ಗುರಿ ಪಡೆದ ಬಾಂಗ್ಲಾದೇಶ ವಿಕೆಟ್​ ನಷ್ಟವಿಲ್ಲದೆ 30 ರನ್​ ಬಾರಿಸಿ ಗೆಲುವಿನ ನಗೆ ಬೀರಿತು. ಆ ಮೂಲಕ ಬಾಂಗ್ಲಾದೇಶ ತಂಡ ಪಾಕ್​ ನೆಲದಲ್ಲಿ ಇದೇ ಮೊದಲ ಗೆಲುವು ಸಾಧಿಸಿ ಐತಿಹಾಸಿಕ ಸಾಧನೆ ಮಾಡಿದೆ.

Bangladesh Humiliate Pakistan In Their Own Home
ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹರಾಜು: ಕೊಹ್ಲಿ ಜರ್ಸಿಗೆ 40 ಲಕ್ಷ, ಧೋನಿ-ರೋಹಿತ್ ಬ್ಯಾಟ್‌ಗೂ ಬಂಪರ್ ಬಿಡ್; ಒಟ್ಟಾರೆ 1.93 ಕೋಟಿ ರೂ ಸಂಗ್ರಹ!

ಬಾಂಗ್ಲಾ ಉತ್ತಮ ಪ್ರದರ್ಶನ

ಬಾಂಗ್ಲಾ ಪರ ದ್ವಿತೀಯ ಇನಿಂಗ್ಸ್​ನಲ್ಲಿ ಮಾರಕ ಬೌಲಿಂಗ್​ ದಾಳಿ ನಡೆಸಿದ ಮೆಹಿದಿ ಹಸನ್ ಮಿರಾಜ್ 21 ರನ್​ಗೆ 4 ವಿಕೆಟ್​ ಉಡಾಯಿಸಿದರೆ, ಅನುಭವಿ ಶಕಿಬ್​ ಅಲ್​ ಹಸನ್​, 3 ವಿಕೆಟ್​ ಕಡೆವಿದರು. ಬ್ಯಾಟಿಂಗ್​ನಲ್ಲಿ ಮೊದಲ ಇನಿಂಗ್ಸ್​ನಲ್ಲಿ ಪಾಕ್‌ ಬೌಲರ್‌ಗಳ ಮೇಲೆ ಸವಾರಿ ಮಾಡಿದ್ದ ಅನುಭವಿ ಆಟಗಾರ ಮುಶ್ಫಿಕರ್‌ ರಹೀಂ 191 ರನ್‌ ಬಾರಿಸಿದ್ದರು. ಅವರ ಈ ಭರ್ಜರಿ ಆಟ ಬಾಂಗ್ಲಾ ತಂಡಕ್ಕೆ ಮೇಲುಗೈ ಸಾಧಿಸುವಂತೆ ಮಾಡಿತು. ಉಳಿದಂತೆ ಮೆಹಿದಿ ಹಸನ್ 77, ಶಾದ್ಮನ್ ಇಸ್ಲಾಂ 93 ರನ್​ ಬಾರಿಸಿದ್ದರು.

ಐತಿಹಾಸಿಕ ಗೆಲುವು

ಬಾಂಗ್ಲಾದೇಶ ಪಾಕಿಸ್ತಾನ ನೆಲದಲ್ಲಿ ಸಾಧಿಸಿದ ಮೊದಲ ಗೆಲುವು ಇದಾಗಿದೆ. ಇದುವರೆಗೆ 13 ಟೆಸ್ಟ್​ ಪಂದ್ಯಗಳನ್ನು ಆಡಿತ್ತಾದರೂ ಒಂದೇ ಒಂದು ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ. ಇದೀಗ 14 ನೇ ಪ್ರಯತ್ನದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಸಾಧನೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com