ಟಿ20 ವಿಶ್ವಕಪ್‌ಗೆ ಭಾರತ ಮಹಿಳಾ ತಂಡ ಪ್ರಕಟ: ಗಾಯಗೊಂಡಿದ್ದ ಕನ್ನಡತಿ ಶ್ರೇಯಾಂಕ ಪಾಟೀಲ್‌ಗೆ ಅವಕಾಶ!

ಭಾರತ ತಂಡದಲ್ಲಿ 19 ವರ್ಷದೊಳಗಿನವರ ಟಿ20 ವಿಶ್ವಕಪ್ ವಿಜೇತ ನಾಯಕಿ ಶಫಾಲಿ ವರ್ಮಾ ಇದ್ದಾರೆ. ವಿಶ್ವದ ಸ್ಫೋಟಕ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ತಂಡದಲ್ಲಿದ್ದಾರೆ. 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದು ಮೂರು ಆಟಗಾರರನ್ನು ಮೀಸಲು ಇರಿಸಿದ್ದಾರೆ.
ಶ್ರೇಯಾಂಕ ಪಾಟೀಲ್
ಶ್ರೇಯಾಂಕ ಪಾಟೀಲ್
Updated on

ಬೆಂಗಳೂರು: 2024ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಆಡುವ ತಂಡವು ಚೊಚ್ಚಲ ಪ್ರಶಸ್ತಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಟೂರ್ನಿ ಅಕ್ಟೋಬರ್ 3 ರಿಂದ 20ರ ನಡುವೆ ಯುಎಇಯಲ್ಲಿ ನಡೆಯಲಿದೆ.

ಭಾರತ ತಂಡದಲ್ಲಿ 19 ವರ್ಷದೊಳಗಿನವರ ಟಿ20 ವಿಶ್ವಕಪ್ ವಿಜೇತ ನಾಯಕಿ ಶಫಾಲಿ ವರ್ಮಾ ಇದ್ದಾರೆ. ವಿಶ್ವದ ಸ್ಫೋಟಕ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ತಂಡದಲ್ಲಿದ್ದಾರೆ. 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದು ಮೂರು ಆಟಗಾರರನ್ನು ಮೀಸಲು ಇರಿಸಿದ್ದಾರೆ.

ಅಕ್ಟೋಬರ್ 3ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್‌ಗಾಗಿ ಮಂಗಳವಾರ ಪ್ರಕಟಿಸಲಾದ 15 ಸದಸ್ಯರ ಭಾರತ ತಂಡವನ್ನು ಸ್ಟಾರ್ ಬ್ಯಾಟ್ಸ್‌ಮನ್ ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಯಾಸ್ತಿಕಾ ಭಾಟಿಯಾ ಮತ್ತು ಸ್ಪಿನ್ ಆಲ್‌ರೌಂಡರ್ ಶ್ರೇಯಾಂಕಾ ಪಾಟೀಲ್ ಅವರನ್ನೂ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆದರೆ ಅವರ ಆಯ್ಕೆಯು ಫಿಟ್‌ನೆಸ್ ಅನ್ನು ಅವಲಂಬಿಸಿರುತ್ತದೆ. ಸ್ಟಾರ್ ಬ್ಯಾಟ್ಸ್‌ಮನ್ ಸ್ಮೃತಿ ಮಂಧಾನ ಉಪನಾಯಕಿಯಾಗಿ ನೇಮಕಗೊಂಡಿದ್ದಾರೆ. ಇನ್ನು ಕಳೆದ ಏಷ್ಯಾ ಕಪ್ ವೇಳೆ ಶ್ರೇಯಾಂಕ ಪಾಟೀಲ್ ಗಾಯಗೊಂಡಿದ್ದರು.

ಆರಂಭದಲ್ಲಿ ಬಾಂಗ್ಲಾದೇಶವು ಈ ಪಂದ್ಯಾವಳಿಯನ್ನು ಆಯೋಜಿಸಬೇಕಿತ್ತು. ಆದರೆ ಅಲ್ಲಿನ ರಾಜಕೀಯ ಅಶಾಂತಿಯಿಂದಾಗಿ ಅದನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ವರ್ಗಾಯಿಸಲಾಯಿತು. ಭಾರತವು ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಶ್ರೀಲಂಕಾದೊಂದಿಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಭಾರತ ತಂಡ ಮೊದಲ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಗುರಿಯೊಂದಿಗೆ ಟೂರ್ನಿಗೆ ಪ್ರವೇಶಿಸಲಿದೆ.

ಶ್ರೇಯಾಂಕ ಪಾಟೀಲ್
ಜಯ್ ಶಾ ಐಸಿಸಿ ಅಧ್ಯಕ್ಷ: BCCI ಕಾರ್ಯದರ್ಶಿ ಸ್ಥಾನಕ್ಕೆ ರೇಸ್; ಮುಂಚೂಣಿಯಲ್ಲಿ DDCA ಅಧ್ಯಕ್ಷ ರೋಹನ್ ಜೇಟ್ಲಿ!

ಭಾರತ ಮಹಿಳಾ ಪಡೆ:

ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ಸತಿ ಮಂಧಾನ (ಉಪನಾಯಕಿ), ಶಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್‌ (ವಿಕೆಟ್‌ ಕೀಪರ್‌), ಯಾಸ್ತಿಕಾ ಭಾಟಿಯಾ (ವಿಕೆಟ್‌ ಕೀಪರ್‌), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್‌ ಠಾಕೂರ್‌, ದಯಾಲನ್‌ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್‌, ಶ್ರೇಯಾಂಕಾ ಪಾಟೀಲ್‌, ಸಜನಾ ಸಜೀವನ್.

ಮೀಸಲು ಆಟಗಾರ್ತಿಯರು: ಉಮಾ ಛೆಟ್ರಿ (ವಿಕೆಟ್ ಕೀಪರ್), ತನುಜಾ ಕನ್ವರ್, ಸೈಮಾ ಠಾಕೋರ್.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com