ICC ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ: PCB ಕಂಗಾಲು; ಚಾಂಪಿಯನ್ಸ್ ಟ್ರೋಫಿ ಆಯೋಜಿಸುವ ಪಾಕ್ ಕನಸಿಗೆ ಕೊಳ್ಳಿ?

ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಎಷ್ಟೇ ಖರ್ಚಾದರೂ ಆಯೋಜಿಸಲು ಮುಂದಾಗಿತ್ತು. ಆದರೆ ಭಾರತ ಟೂರ್ನಿಯಿಂದ ಹಿಂದೆ ಸರಿದರೆ ಐಸಿಸಿ, ಪಿಸಿಬಿ ಸೇರಿದಂತೆ ಭಾಗವಹಿಸುವ ಎಲ್ಲ ಕ್ರಿಕೆಟ್ ಮಂಡಳಿಗಳಿಗೆ ಹೊಡೆತ ಬೀಳಲಿದೆ.
ರೋಹಿತ್ ಶರ್ಮಾ-ಜಯ್ ಶಾ
ರೋಹಿತ್ ಶರ್ಮಾ-ಜಯ್ ಶಾ
Updated on

ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ನೇಮಕ ಪಾಕಿಸ್ತಾನದ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಮುಂದಿನ ವರ್ಷ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲಿದೆ. ಈ ಟೂರ್ನಿಗೆ ಭಾರತ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ನಿರಾಕರಿಸಿದರೆ ಐಸಿಸಿ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಪಿಸಿಬಿ ಅಂದುಕೊಂಡಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದ್ದು ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾಗುತ್ತಿದ್ದಂತೆ ಪಿಸಿಬಿ ಮತ್ತೆ ಇಕ್ಕಟ್ಟಿಗೆ ಸಿಲುಕಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಎಷ್ಟೇ ಖರ್ಚಾದರೂ ಆಯೋಜಿಸಲು ಮುಂದಾಗಿತ್ತು. ಆದರೆ ಭಾರತ ಟೂರ್ನಿಯಿಂದ ಹಿಂದೆ ಸರಿದರೆ ಐಸಿಸಿ, ಪಿಸಿಬಿ ಸೇರಿದಂತೆ ಭಾಗವಹಿಸುವ ಎಲ್ಲ ಕ್ರಿಕೆಟ್ ಮಂಡಳಿಗಳಿಗೆ ಹೊಡೆತ ಬೀಳಲಿದೆ. ಪ್ರಸ್ತುತ, ಪಾಕಿಸ್ತಾನದ ಪರಿಸ್ಥಿತಿಯು 2022ರ ಏಷ್ಯಾಕಪ್‌ನಂತೆಯೇ ಇದೆ. ಈ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿಯೂ ಆಡಬೇಕಿತ್ತು. ಆದರೆ ಭಾರತ ಪ್ರವಾಸವನ್ನು ನಿರಾಕರಿಸಿತು.

ಪಿಸಿಬಿಯ ಪ್ರಬಲ ಪ್ರತಿರೋಧದ ಹೊರತಾಗಿಯೂ ಪಂದ್ಯಾವಳಿಯನ್ನು ಪಾಕಿಸ್ತಾನದಿಂದ ಹೊರಕ್ಕೆ ಸ್ಥಳಾಂತರಿಸಬೇಕಾಯಿತು. ಜಯ್ ಶಾ ಆ ಸಮಯದಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರಾಗಿದ್ದರು. ಈಗ ಐಸಿಸಿ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಸಲು ಪಿಸಿಬಿಯನ್ನು ಒತ್ತಾಯಿಸಿದರೆ ಅಚ್ಚರಿಯೇನಿಲ್ಲ. ಆದರೆ, ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಹೈಬ್ರಿಡ್ ಮಾದರಿಯ ಪ್ರಸ್ತಾಪವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪಿಸಿಬಿ ಈಗಾಗಲೇ ಸ್ಪಷ್ಟಪಡಿಸಿದೆ.

ರೋಹಿತ್ ಶರ್ಮಾ-ಜಯ್ ಶಾ
ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪ್ರಾಬಲ್ಯ: ICC ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆ

2008ರಿಂದ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನ ಪ್ರವಾಸ ಮಾಡಿಲ್ಲ. ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸರಣಿ ನಡೆದು 10 ವರ್ಷಕ್ಕೂ ಹೆಚ್ಚು ಕಾಲ ಕಳೆದಿದೆ. ಆದರೆ, 2023ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್‌ಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಭೇಟಿ ನೀಡಿತ್ತು. ಈಗ ಪಿಸಿಬಿ ಹೇಳುವಂತೆ ಪಾಕಿಸ್ತಾನ ಕ್ರಿಕೆಟ್ ತಂಡ ವಿಶ್ವಕಪ್‌ಗೆ ಭಾರತಕ್ಕೆ ಹೋಗಬಹುದಾದರೆ, ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವೂ ಪಾಕಿಸ್ತಾನಕ್ಕೆ ಹೋಗಬೇಕು.

ಉಭಯ ದೇಶಗಳ ನಡುವಿನ ಉದ್ವಿಗ್ನ ರಾಜಕೀಯ ಸಂಬಂಧಗಳು ಇದಕ್ಕೆ ದೊಡ್ಡ ಅಡಚಣೆಯಾಗಿದೆ. 2008ರಲ್ಲಿ ಮುಂಬೈ ಉಗ್ರರ ದಾಳಿಯ ನಂತರ ಭಾರತ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡುವುದನ್ನು ಬಹಿಷ್ಕರಿಸಿದೆ. ಪಾಕಿಸ್ತಾನದಲ್ಲಿ ಭಾರತ ತಂಡದ ಭದ್ರತೆಯೂ ದೊಡ್ಡ ಸಮಸ್ಯೆಯಾಗಿದ್ದು, ತಂಡವನ್ನು ಕಳುಹಿಸುವ ಮೊದಲು ಬಿಸಿಸಿಐ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com