
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇಂದಿನಿಂದ ಹೊಸ ಐಸಿಸಿ ಅಧ್ಯಕ್ಷರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಸ್ಥಾನವನ್ನು ಜಯ್ ಶಾ ವಹಿಸಿಕೊಂಡರು.
ಐಸಿಸಿ ಅಧ್ಯಕ್ಷರ ಹುದ್ದೆಗೆ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು ಇಂದೇ ಅಧಿಕಾರ ವಹಿಸಿಕೊಂಡರು. ಇದರ ಬೆನ್ನಲ್ಲೇ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ತಯಾರಿ ನಡೆಸುವುದಾಗಿ ಹೇಳಿದ್ದು ಮಹಿಳಾ ಕ್ರಿಕೆಟ್‌ಗೂ ಉತ್ತೇಜನ ನೀಡಲಾಗುವುದು ಎಂದರು.
ICC ಅಧ್ಯಕ್ಷರಾಗಿ ತಮ್ಮ ಮೊದಲ ಹೇಳಿಕೆಯಲ್ಲಿ ಜಯ್ ಶಾ, ಐಸಿಸಿ ಅಧ್ಯಕ್ಷರ ಪಾತ್ರವನ್ನು ವಹಿಸಿಕೊಳ್ಳಲು ನಾನು ಹೆಮ್ಮೆಪಡುತ್ತೇನೆ. ಐಸಿಸಿ ನಿರ್ದೇಶಕರು ಮತ್ತು ಸದಸ್ಯ ಮಂಡಳಿಗಳ ಬೆಂಬಲ ಮತ್ತು ವಿಶ್ವಾಸಕ್ಕೆ ನಾನು ಕೃತಜ್ಞನಾಗಿದ್ದೇನೆ. ಅಲ್ಲದೆ ತಮ್ಮ ಅಧಿಕಾರಾವಧಿಯ ಆದ್ಯತೆಗಳನ್ನು ವಿವರಿಸಿದ ಅವರು, 2028ರ ಲಾಸ್ ಏಂಜಲೀಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರೀಡೆಯನ್ನು ಪ್ರಮುಖ ಅವಕಾಶವಾಗಿ ಸೇರಿಸುವುದು ಮತ್ತು ಮಹಿಳಾ ಆಟದ ಬೆಳವಣಿಗೆಯನ್ನು ಒಳಗೊಂಡಿರುತ್ತದೆ ಎಂದು ಹೇಳಿದರು.
ಅನೇಕ ಸ್ವರೂಪಗಳ ಸಹಬಾಳ್ವೆ ಮತ್ತು ಮಹಿಳೆಯರ ಆಟದ ಬೆಳವಣಿಗೆಯನ್ನು ವೇಗಗೊಳಿಸುವ ಅಗತ್ಯದೊಂದಿಗೆ ನಾವು ಒಂದು ಮಹತ್ವದ ಘಟ್ಟದಲ್ಲಿ ನಿಂತಿದ್ದೇವೆ ಎಂದು ಅವರು ಹೇಳಿದರು. ಕ್ರಿಕೆಟ್ ಜಾಗತಿಕ ಮಟ್ಟದಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದೆ. ಈ ಅವಕಾಶಗಳನ್ನು ಬಳಸಿಕೊಳ್ಳಲು ಮತ್ತು ಆಟವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ICC ತಂಡ ಮತ್ತು ಸದಸ್ಯ ರಾಷ್ಟ್ರಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದರು.
ಜೈ ಶಾ ಕ್ರಿಕೆಟ್‌ನಲ್ಲಿ ಹಲವು ದೊಡ್ಡ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ
ಜಯ್ ಶಾ ಕ್ರಿಕೆಟ್ ಆಡಳಿತದಲ್ಲಿ ವ್ಯಾಪಕ ಅನುಭವ ಹೊಂದಿದ್ದಾರೆ. ಅವರು 2009ರಲ್ಲಿ ಗುಜರಾತ್ ಕ್ರಿಕೆಟ್ ಸಂಸ್ಥೆಯೊಂದಿಗೆ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರ ಅಧಿಕಾರಾವಧಿಯಲ್ಲಿ ಅವರು ಅಹಮದಾಬಾದ್‌ನಲ್ಲಿ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂನ ಅಭಿವೃದ್ಧಿಯನ್ನು ನೋಡಿಕೊಳ್ಳುತ್ತಿದ್ದರು. 2019ರಲ್ಲಿ ಶಾ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು ಸೇರಿಕೊಂಡರು. ಅದರ ಕಿರಿಯ ಗೌರವ ಕಾರ್ಯದರ್ಶಿಯಾದರು. ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿ ಮತ್ತು ಐಸಿಸಿಯ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಅಧ್ಯಕ್ಷರಾಗಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.
ಜಯ್ ಶಾ ಐಸಿಸಿ ಅಧ್ಯಕ್ಷರಾಗುತ್ತಿದ್ದಂತೆ ಅತ್ತ ಪಾಕಿಸ್ತಾನ ಮೆತ್ತಗಾಗಿದೆ. ಮುಂದಿನ ಫೆಬ್ರವರಿಯಲ್ಲಿ ನಡೆಯಬೇಕಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕೂಟವು ಹೈಬ್ರಿಡ್ ಮಾದರಿಯಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಭಾರತದ ಪಂದ್ಯಗಳು ದುಬೈನಲ್ಲಿ ಉಳಿದ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಸಲು ಪಾಕಿಸ್ತಾನ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
Advertisement