ಅಡಿಲೇಡ್: ಭಾರತ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದ್ದು, ಬೌಲಿಂಗ್ ನಲ್ಲಿ ಆರ್ಭಟಿಸಿದ್ದ ಪ್ಯಾಟ್ ಕಮಿನ್ಸ್ ಪಡೆ ಬ್ಯಾಟಿಂಗ್ ನಲ್ಲೂ ಉತ್ತಮ ಪ್ರದರ್ಶನ ತೋರುವ ಮೂಲಕ ದಿನದ ಗೌರವಕ್ಕೆ ಪಾತ್ರವಾಗಿದೆ.
ಭಾರತ ಕಲೆ ಹಾಕಿದ್ದ 180ರನ್ ಗಳ ಮೊದಲ ಇನ್ನಿಂಗ್ಸ್ ಗೆ ಉತ್ತರವಾಗಿ ತನ್ನ ಪಾಲಿನ ಮೊದಲ ಇನ್ನಿಂಗ್ಸ್ ಆರಂಭಿಸಿದ್ದು, ಆರಂಭಿಕ ಆಘಾತದ ಹೊರತಾಗಿಯೂ ಸ್ಥಿರ ಬ್ಯಾಟಿಂಗ್ ಪ್ರದರ್ಶನ ತೋರಿದೆ. ದಿನದಾಟ ಅಂತ್ಯದ ವೇಳೆಗೆ ಆಸ್ಟ್ರೇಲಿಯಾ 1 ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿದ್ದು, ಇನ್ನೂ 94 ರನ್ ಗಳ ಹಿನ್ನಡೆಯಲ್ಲಿದೆ.
ಆಸ್ಟ್ರೇಲಿಯಾ ಪರ ಉಸ್ಮಾನ್ ಖವಾಜ 13 ರನ್ ಗಳಿ ಔಟಾಗಿದ್ದರೆ, 38ರನ್ ಗಳಿಸಿರುವ ನಾಥನ್ ಮೆಕ್‌ಸ್ವೀನಿ ಮತ್ತು ರನ್ ಗಳಿಸಿರುವ 20 ರನ್ ಗಳಿಸಿರುವ ಮಾರ್ನಸ್ ಲ್ಯಾಬುಸ್ಚಾಗ್ನೆ 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಇನ್ನು ಭಾರತದ ಪರ ಜಸ್ ಪ್ರೀತ್ ಬುಮ್ರಾ 1 ವಿಕೆಟ್ ಪಡೆದಿದ್ದು, ಅವರನ್ನು ಹೊರತು ಪಡಿಸಿದರೆ ಉಳಿದಾವ ಬೌಲರ್ ಕೂಡ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ.
Advertisement