
ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಅಂತ್ಯವಾಗಿದ್ದು, ಭರ್ಜರಿ ಬ್ಯಾಟಿಂಗ್ ನಡೆಸಿರುವ ಆಸ್ಟ್ರೇಲಿಯಾ ತಂಡ 2ನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 405 ರನ್ ಗಳಿಸಿದೆ.
ನಿನ್ನೆ ಆರಂಭವಾಗಿದ್ದ 3ನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ದಿನ ವಿಕೆಟ್ ನಷ್ಟವಿಲ್ಲದೇ 28 ರನ್‌ಗಳಿಸಿತ್ತು.
ಇಂದು ಬ್ಯಾಟಿಂಗ್ ಮುಂದುವರೆಸಿದ ಆಸ್ಟ್ರೇಲಿಯಾ ಟ್ರಾವಿಸ್ ಹೆಡ್ (152 ರನ್) ಮತ್ತು ಸ್ಟೀವೆನ್ ಸ್ಮಿತ್ (101 ರನ್) ಶತಕಗಳ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 405 ರನ್ ಗಳಿಸಿದೆ. 2ನೇ ದಿನದಾಟದ ಅಂತ್ಯದ ವೇಳೆಗೆ 45 ರನ್ ಗಳಿಸಿರುವ ಅಲೆಕ್ಸ್ ಕರಿ ಮತ್ತು 7 ರನ್ ಗಳಿಸಿರುವ ಮಿಚೆಲ್ ಸ್ಟಾರ್ಕ್ 3ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಭಾರತದ ಪರ ಜಸ್ ಪ್ರೀತ್ ಬುಮ್ರಾ ಮತ್ತೆ ಭರ್ಜರಿ ಬೌಲಿಂಗ್ ಮಾಡಿ 5 ವಿಕೆಟ್ ಕಬಳಿಸಿದ್ದು, ಉಳಿದಂತೆ ಮಹಮದ್ ಸಿರಾಜ್ ಮತ್ತು ನಿತೀಶ್ ಕುಮಾರ್ ರೆಡ್ಡಿ ತಲಾ 1 ವಿಕೆಟ್ ಪಡೆದರು.
Advertisement