
ಮೆಲ್ಬೋರ್ನ್: ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 4ನೇ ಪಂದ್ಯದಲ್ಲೂ ಭಾರತಕ್ಕೆ ಹೀನಾಯ ಸೋಲು ಎದುರಾಗಿದ್ದು, ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 2-1 ಮುನ್ನಡೆ ಸಾಧಿಸಿದೆ.
ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ್ದ 339 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ 2ನೇ ಇನ್ನಿಂಗ್ಸ್ ನ ಆರಂಭದಿಂದಲೂ ರನ್ ಗಳಿಸಲು ತಿಣುಕಾಡಿತು.
ಭಾರತದ ಪರ ಯಶಸ್ವಿ ಜೈಸ್ವಾಲ್ 84 ರನ್ ಮತ್ತು ರಿಷಬ್ ಪಂತ್ 30 ರನ್ ಗಳಿಸಿದ್ದು ಬಿಟ್ಟರೆ ಉಳಿದಾವ ಬ್ಯಾಟರ್ ಕೂಡ ಎರಡಂಕಿ ಮೊತ್ತ ಕೂಡ ದಾಟಲಿಲ್ಲ. ಆಸ್ಟ್ರೇಲಿಯಾದ ಬೌಲರ್ ಗಳ ಸಾಂಘಿಕ ಹೋರಾಟಕ್ಕೆ ಮಣಿದ ಭಾರತ ಅಂತಿಮವಾಗಿ ಕೇವಲ 155 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಬರೊಬ್ಬರಿ 184ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.
ಇನ್ನು ಆಸ್ಟ್ರೇಲಿಯಾ ಪರ ನಾಯಕ ಪ್ಯಾಟ್ ಕಮಿನ್ಸ್ ಮತ್ತು ಸ್ಕಾಟ್ ಬೋಲಾಂಡ್ ತಲಾ 3 ವಿಕೆಟ್ ಪಡೆದರೆ, ನಾಥನ್ ಲಯಾನ್ 2, ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಸ್ಟಾರ್ಕ್ ತಲಾ 1 ವಿಕೆಟ್ ಪಡೆದರು.
ಈ ಪಂದ್ಯದ ಗೆಲುವಿನ ಮೂಲಕ 5 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಸರಣಿಯ ಅಂತಿಮ ಪಂದ್ಯ ಜನವರಿ 3ರಂದು ಸಿಡ್ನಿಯಲ್ಲಿ ಆರಂಭವಾಗಲಿದೆ. ಸರಣಿ ಸಮಬಲಕ್ಕೆ ಭಾರತ ಈ ಪಂದ್ಯ ಗೆಲ್ಲಲೇ ಬೇಕಿದೆ.
Advertisement