IND vs ENG: 3ನೇ ಟೆಸ್ಟ್ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ? ನಾಳೆ ಟೀಂ ಇಂಡಿಯಾ ತಂಡ ಪ್ರಕಟ!

ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ಉಭಯ ತಂಡಗಳು ತಲಾ ಒಂದು ಪಂದ್ಯದಲ್ಲಿ ಗೆಲ್ಲುವ ಮೂಲಕ ಸಮಬಲ ಸಾಧಿಸಿದೆ. ಮೊದಲ ಟೆಸ್ಟ್ ಪಂದ್ಯದ ಸೋಲಿನ ನಂತರ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದೆ.
ಜಸ್ ಪ್ರೀತ್ ಬುಮ್ರಾ-ವಿರಾಟ್ ಕೊಹ್ಲಿ
ಜಸ್ ಪ್ರೀತ್ ಬುಮ್ರಾ-ವಿರಾಟ್ ಕೊಹ್ಲಿ

ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ಉಭಯ ತಂಡಗಳು ತಲಾ ಒಂದು ಪಂದ್ಯದಲ್ಲಿ ಗೆಲ್ಲುವ ಮೂಲಕ ಸಮಬಲ ಸಾಧಿಸಿದೆ. ಮೊದಲ ಟೆಸ್ಟ್ ಪಂದ್ಯದ ಸೋಲಿನ ನಂತರ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ಭಾರತೀಯ ಟೆಸ್ಟ್ ತಂಡವನ್ನು ಮಂಗಳವಾರ ಪ್ರಕಟಿಸಬಹುದು. ಆದರೆ ಫೆಬ್ರವರಿ 15ರಿಂದ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಬಹುದು. ಇದಲ್ಲದೇ ಮುಂದಿನ ಮೂರು ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಆಡುತ್ತಾರೋ ಇಲ್ಲವೋ ಎಂಬುದು ಕೂಡ ಟೀಂ ಇಂಡಿಯಾ ಘೋಷಣೆಯಿಂದ ಗೊತ್ತಾಗಲಿದೆ.

ಎರಡನೇ ಟೆಸ್ಟ್‌ನಲ್ಲಿ ಬುಮ್ರಾ ಉತ್ತಮ ಪ್ರದರ್ಶನ
ವೈಜಾಗ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಅಮೋಘ ಪ್ರದರ್ಶನ ನೀಡಿ ಟೀಂ ಇಂಡಿಯಾ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಅವರು ಎರಡನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದರು. ಇದರಲ್ಲಿ ಅವರು ಮೊದಲ ಇನ್ನಿಂಗ್ಸ್ನಲ್ಲಿ 6 ವಿಕೆಟ್ಗಳನ್ನು ಪಡೆದರೆ ಎರಡನೇ ಇನ್ನಿಂಗ್ಸ್ನಲ್ಲಿ 3 ವಿಕೆಟ್ಗಳನ್ನು ಪಡೆದಿದ್ದಾರೆ. ಈ ಟೆಸ್ಟ್ನಲ್ಲಿ ಒಟ್ಟು 91 ರನ್ಗಳನ್ನು ನೀಡಿದರು. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಬುಮ್ರಾ 15.5 ಓವರ್‌ಗಳಲ್ಲಿ 45 ರನ್ ನೀಡಿ 6 ವಿಕೆಟ್ ಪಡೆದರೆ, ಎರಡನೇ ಇನಿಂಗ್ಸ್‌ನಲ್ಲಿಯೂ 17.2 ಓವರ್‌ಗಳಲ್ಲಿ 46 ರನ್ ನೀಡಿ 3 ವಿಕೆಟ್ ಪಡೆದರು. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಬುಮ್ರಾ ಅವರ ಎರಡನೇ ಅತ್ಯುತ್ತಮ ಪ್ರದರ್ಶನವಾಗಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅವರು ಅತ್ಯುತ್ತಮ ಬೌಲರ್ ಎಂಬುದು ಸಾಬೀತಾಗಿದೆ.

ಬುಮ್ರಾಗೆ ವಿಶ್ರಾಂತಿ ನೀಡುವುದು ಉತ್ತಮ ನಿರ್ಧಾರವಲ್ಲ
ಕೆಲಸದ ಹೊರೆಯಿಂದಾಗಿ ಬುಮ್ರಾಗೆ ಮೂರನೇ ಟೆಸ್ಟ್‌ಗೆ ವಿಶ್ರಾಂತಿ ನೀಡಬಹುದು. ಆದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಎದುರಿಸುತ್ತಿರುವ ಪರಿಸ್ಥಿತಿಯಲ್ಲಿ, ಅಂತಹ ನಿರ್ಧಾರವು ತಂಡದ ಹಿತಾಸಕ್ತಿಗೆ ಪೂರವಾಗಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ತಲುಪಲು ಭಾರತವು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲಬೇಕಾಗಿದೆ. ಬುಮ್ರಾ ಇದರಲ್ಲಿ ದೊಡ್ಡ ಪಾತ್ರವನ್ನು ವಹಿಸಬಹುದು. ಏಕೆಂದರೆ ಅವರು ತಂಡದ ವಿಕೆಟ್ ಟೇಕಿಂಗ್ ಬೌಲರ್ ಎಂದು ಎಲ್ಲರಿಗೂ ತಿಳಿದಿದೆ. ಅದೇನೇ ಇರಲಿ, ಇದೀಗ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15ರಿಂದ ಆರಂಭವಾಗಲಿದ್ದು, ಅಷ್ಟರಲ್ಲಿ ವಿಶ್ರಾಂತಿಯ ಸಂಪೂರ್ಣ ಅವಕಾಶ ಸಿಗಲಿದೆ. ಅದೇನೇ ಇರಲಿ, ಮುಖೇಶ್ ಮತ್ತು ಸಿರಾಜ್ ಅವರ ಬಲದ ಮೇಲೆ ಟೆಸ್ಟ್ ಪಂದ್ಯವನ್ನು ಗೆಲ್ಲುವುದನ್ನು ನೀವು ಊಹಿಸಲು ಸಾಧ್ಯವಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com