ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್‌ನಿಂದ ಹೊರಗುಳಿದ ಕೆ ಎಲ್ ರಾಹುಲ್; ಚೊಚ್ಚಲ ಪಂದ್ಯಕ್ಕೆ ಸರ್ಫರಾಜ್ ಸಜ್ಜು!

ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಗುರುವಾರ ರಾಜ್‌ಕೋಟ್‌ನಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಿಂದ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಸರಣಿಯ ಆರಂಭಿಕ ಪಂದ್ಯದ ವೇಳೆ ಬಲಭಾಗದ ಮೋಣಕಾಲಿನ ನೋವಿನಿಂದ ಬಳಲುತ್ತಿದ್ದ ರಾಹುಲ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. 
ಕೆಎಲ್ ರಾಹುಲ್
ಕೆಎಲ್ ರಾಹುಲ್

ನವದೆಹಲಿ: ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಗುರುವಾರ ರಾಜ್‌ಕೋಟ್‌ನಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಿಂದ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಸರಣಿಯ ಆರಂಭಿಕ ಪಂದ್ಯದ ವೇಳೆ ಬಲಭಾಗದ ಮೋಣಕಾಲಿನ ನೋವಿನಿಂದ ಬಳಲುತ್ತಿದ್ದ ರಾಹುಲ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು.ರಾಹುಲ್ ಸಂಪೂರ್ಣವಾಗಿ ಫಿಟ್ ಆಗಿಲ್ಲ. ರಾಹುಲ್ ಲಭ್ಯತೆ ಕುರಿತು ತಿಳಿಸಲು ಇನ್ನೂ ಒಂದು ವಾರ ಕಾಲ ಅವರ ಮೇಲೆ ನಿಗಾ ವಹಿಸಲಾಗಿದೆ ಎಂದು ವೈದ್ಯಕೀಯ ತಂಡವು ಆಯ್ಕೆದಾರರಿಗೆ ತಿಳಿಸಿದೆ ಎಂದು ತಿಳಿದುಬಂದಿದೆ.

ರಾಹುಲ್ ಇನ್ನೂ ಎನ್‌ಸಿಎಯಲ್ಲಿದ್ದಾರೆ ಮತ್ತು ಅವರು ರಾಜ್‌ಕೋಟ್‌ಗೆ ಪ್ರಯಾಣಿಸಿಲ್ಲ' ಎಂದು ಮೂಲಗಳು ತಿಳಿಸಿವೆ. ರಾಹುಲ್ ಅನುಪಸ್ಥಿತಿಯಲ್ಲಿ ಮುಂಬೈ ಬ್ಯಾಟರ್ ಸರ್ಫರಾಜ್ ಖಾನ್ ಮೂರನೇ ಪಂದ್ಯದಲ್ಲಿ ತಮ್ಮ ಬಹುನಿರೀಕ್ಷಿತ ಟೆಸ್ಟ್ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ. ಸರ್ಫರಾಜ್ ತಮ್ಮ ಚೊಚ್ಚಲ ಪಂದ್ಯವನ್ನು ಆಡಲಿದ್ದಾರೆ. ಈ ಟೆಸ್ಟ್‌ಗೆ ರಾಹುಲ್ ಹೊರಗುಳಿದಿರುವುದರಿಂದ, ಸರ್ಫರಾಜ್ ಅವರ ಮೊದಲ ಪಂದ್ಯವನ್ನಾಡಲಿದ್ದಾರೆ ಎನ್ನಲಾಗಿದೆ.

ಭಾರತವು ರಾಜ್‌ಕೋಟ್‌ನಲ್ಲಿ ಮತ್ತೊಬ್ಬ ಆಟಗಾರ ಚೊಚ್ಚಲ ಪಂದ್ಯವನ್ನಾಡುವ ಸಾಧ್ಯತೆಯಿದೆ. ವಿಕೆಟ್‌ ಕೀಪರ್ ಆಗಿ ಕೆ ಎಸ್ ಭರತ್ ಬದಲಿಗೆ ಧ್ರುವ್ ಜುರೆಲ್ ಆಡುವ ಸಾಧ್ಯತೆಯಿದೆ. ಈ ಮಧ್ಯೆ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ತಮ್ಮ ಮಂಡಿರಜ್ಜು ಗಾಯದಿಂದ ಚೇತರಿಸಿಕೊಂಡ ನಂತರ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com