ವಿರುಷ್ಕಾ ದಂಪತಿಗೆ ಗಂಡು ಮಗು ಜನನ; ಪಾಕಿಸ್ತಾನದಲ್ಲೂ ಅಭಿಮಾನಿಗಳಿಂದ ಸಿಹಿ ಹಂಚಿ ಸಂಭ್ರಮ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿಗೆ ಎರಡನೇ ಮಗು ಜನಿಸಿದ್ದು, ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಇದೀಗ ದೇಶದಲ್ಲಿ ವಿರಾಟ್ ಮತ್ತು ಅನುಷ್ಕಾ ಅವರ ಮಗನ ಜನನವನ್ನು ಅಭಿಮಾನಿಗಳು ಆಚರಿಸುತ್ತಿದ್ದರೆ, ಇತ್ತ ಪಾಕಿಸ್ತಾನದಲ್ಲಿಯೂ ಸಂಭ್ರಮಾಚರಣೆ ನಡೆಯುತ್ತಿವೆ.
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ
Updated on

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿಗೆ ಎರಡನೇ ಮಗು ಜನಿಸಿದ್ದು, ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದರು. ಬಳಿಕ ತಪ್ಪು ಮಾಹಿತಿ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದೀಗ ಸ್ವತಃ ವಿರುಷ್ಕಾ ದಂಪತಿಯೇ ಫೆಬ್ರುವರಿ 15ರಂದು ಅಕಾಯ್ ಜನನದ ಸುದ್ಧಿಯನ್ನು ಬಹಿರಂಗಪಡಿಸಿದ್ದಾರೆ.

ಇದೀಗ ದೇಶದಲ್ಲಿ ವಿರಾಟ್ ಮತ್ತು ಅನುಷ್ಕಾ ಅವರ ಮಗನ ಜನನವನ್ನು ಅಭಿಮಾನಿಗಳು ಆಚರಿಸುತ್ತಿದ್ದರೆ, ಇತ್ತ ಪಾಕಿಸ್ತಾನದಲ್ಲಿಯೂ ಸಂಭ್ರಮಾಚರಣೆ ನಡೆಯುತ್ತಿವೆ. ಕೊಹ್ಲಿ ಅಭಿಮಾನಿಗಳು ಅಲ್ಲಿಯೂ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಮಗು ಜನನಕ್ಕೆ ವಿರಾಟ್ ಅವರಿಗೆ ಅಭಿನಂದನೆ ಸಲ್ಲಿಸುವುದು ಮಾತ್ರವಲ್ಲದೆ, ಮೈದಾನದಲ್ಲಿ ತಮ್ಮ ತಂದೆಯ ಕ್ರಿಕೆಟ್ ದಾಖಲೆಯನ್ನು ಮುರಿಯುವಂತೆ ಅಕಾಯ್‌ನಿಗೆ ಶುಭಕೋರಿದ್ದಾರೆ.

ಅರ್ಜುನ್ ತೆಂಡೂಲ್ಕರ್ ಅವರ ತಂದೆ ಸಚಿನ್ ತೆಂಡೂಲ್ಕರ್ ಅವರನ್ನು ಅನುಸರಿಸಿದಂತೆ ವಿರಾಟ್ ಅವರ ಮಗ ಅಕಾಯ್ ತನ್ನ ತಂದೆಯನ್ನು ಅನುಸರಿಸಲಿ ಮತ್ತು ಅವರ ದಾಖಲೆಗಳನ್ನು ಮುರಿಯುವಂತಾಗಲಿ ಎಂದು ಪಾಕಿಸ್ತಾನದ ಅಭಿಮಾನಿಗಳು ಹಾರೈಸಿದ್ದಾರೆ.

ಕೊಹ್ಲಿ ಮತ್ತು ಅನುಷ್ಕಾ ದಂಪತಿಗೆ ಈಗಾಗಲೇ ಮೂರು ವರ್ಷದ ಮಗಳು ವಮಿಕಾ ಇದ್ದಾರೆ.

'ನಮ್ಮ ಹೃದಯಗಳು ಸಮೃದ್ಧ ಸಂತೋಷ ಮತ್ತು ಪ್ರೀತಿಯಿಂದ ತುಂಬಿವೆ. ಫೆಬ್ರುವರಿ 15 ರಂದು ನಾವು ನಮ್ಮ ಗಂಡು ಮಗು ಅಕಾಯ್ ಮತ್ತು ವಮಿಕಾಳ ಸಹೋದರನನ್ನು ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಎಂದು ಎಲ್ಲರಿಗೂ ತಿಳಿಸಲು ನಾವು ಸಂತೋಷಪಡುತ್ತೇವೆ' ಎಂದು ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

'ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ನಾವು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸುವಂತೆ ನಾವು ವಿನಂತಿಸುತ್ತೇವೆ' ಎಂದಿದ್ದಾರೆ. ವೈಯಕ್ತಿಕ ಕಾರಣಗಳಿಂದ ಕೊಹ್ಲಿ ಸದ್ಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಸರಣಿಯ ಮೊದಲ ಎರಡು ಟೆಸ್ಟ್‌ಗಳಿಂದ ಹೊರಗುಳಿದಿದ್ದರು. ನಂತರ ಕೊನೆಯ ಮೂರು ಟೆಸ್ಟ್‌ಗಳಿಂದಲೂ ಹಿಂದೆ ಸರಿದಿದ್ದರು.

ಜನವರಿಯಲ್ಲಿ ಕೇಪ್ ಟೌನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಅವರು ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ಪಂದ್ಯದಲ್ಲಿ ಭಾರತ ಏಳು ವಿಕೆಟ್‌ಗಳಿಂದ ಗೆದ್ದಿತು. ಅವರು ಎರಡು ಇನಿಂಗ್ಸ್‌ಗಳಲ್ಲಿ 46 ಮತ್ತು 12 ರನ್ ಗಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com