
ಚೆನ್ನೈ: 2024ರ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ 17 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದ್ದು, ಮಾರ್ಚ್ 22 ರಂದು ಚೆನ್ನೈನಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಉದ್ಘಾಟನಾ ಪಂದ್ಯ ನಡೆಯಲಿದೆ.
ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಮುಂದಿನ ತಿಂಗಳ ಆರಂಭದಲ್ಲಿ ಪ್ರಕಟಿಸಿದ ನಂತರ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.
ಟೂರ್ನಿಯ ಮೊದಲ 17 ದಿನಗಳಲ್ಲಿ 21 ಪಂದ್ಯಗಳು ನಡೆಯಲಿವೆ. ಮಾರ್ಚ್ 23 ರಂದು ಮೊಹಾಲಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಲಿದೆ. 10 ಬಲಿಷ್ಟ ತಂಡಗಳು ಈ ಬಾರಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ. ಲೋಕಸಭಾ ಚುನಾವಣೆ ಏಪ್ರಿಲ್-ಮೇ ತಿಂಗಳಲ್ಲಿ ನಡೆಯುವ ನಿರೀಕ್ಷೆಯಿದೆ.
Advertisement