ಬೆಂಗಳೂರು: ಹೃದಯಾಘಾತದಿಂದ ಕುಸಿದು ಬಿದ್ದು ಯುವ ಕ್ರಿಕೆಟಿಗ ಹೊಯ್ಸಳ ನಿಧನ

ಆಡಿಟ್‌ ಮತ್ತು ಅಕೌಂಟ್ಸ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್‌ ಟೂರ್ನಿಯ ಪಂದ್ಯದ ವೇಳೆ ಕರ್ನಾಟಕ ತಂಡದ ಆಟಗಾರ ಕೆ.ಹೊಯ್ಸಳ (35) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕ್ರಿಕೆಟಿಗ ಹೊಯ್ಸಳ
ಕ್ರಿಕೆಟಿಗ ಹೊಯ್ಸಳ

ಬೆಂಗಳೂರು: ನಗರದಲ್ಲಿ ಗುರುವಾರ ಆಡಿಟ್‌ ಮತ್ತು ಅಕೌಂಟ್ಸ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್‌ ಟೂರ್ನಿಯ ಪಂದ್ಯದ ವೇಳೆ ಕರ್ನಾಟಕ ತಂಡದ ಆಟಗಾರ ಕೆ.ಹೊಯ್ಸಳ (35) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ವರದಿ ಪ್ರಕಾರ ಪ್ರಸ್ತುತ ನಡೆಯುತ್ತಿರುವ ಏಜಿಸ್ ಸೌತ್ ಝೋನ್ ಟೂರ್ನಿಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿತ್ತು. ಈ ವೇಳೆ ತಂಡದೊಂದಿಗೆ ಸಂಭ್ರಮಾಚರಣೆ ಮಾಡಿದ್ದ ಹೊಯ್ಸಳಗೆ ಮೈದಾನದಲ್ಲೇ ಎದೆಯಲ್ಲಿ ನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿದ್ದಾರೆ.

ಬಳಿಕ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲೇ ಹೊಯ್ಸಳ ಅವರ ಪ್ರಾಣಪಕ್ಷಿ ಹಾರಿ ಹೋಗಿದೆ. ಫೆಬ್ರವರಿ 22 ನೇ ಗುರುವಾರದಂದು ಈ ಘಟನೆ ನಡೆದಿದ್ದು, ಫೆಬ್ರವರಿ 23 ರ ಸಂಜೆಯಂದು ಬೆಳಕಿಗೆ ಬಂದಿದೆ.

ಕ್ರಿಕೆಟಿಗ ಹೊಯ್ಸಳ
ಭೀಕರ ರಸ್ತೆ ಅಪಘಾತದಲ್ಲಿ ಕ್ರಿಕೆಟರ್ ರಿಷಬ್ ಪಂತ್ ಗೆ ಗಾಯ, ಪರಿಸ್ಥಿತಿ ಗಂಭೀರ: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು!

ಯುವ ಕ್ರಿಕೆಟಿಗನ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿರುವ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ‘ಕರ್ನಾಟಕದ ಉದಯೋನ್ಮುಖ ಕ್ರಿಕೆಟಿಗನ ನಿಧನದ ಬಗ್ಗೆ ಕೇಳಿ ದುಃಖವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಅವರ ಸ್ನೇಹಿತರು ಮತ್ತು ಕುಟುಂಬಕ್ಕೆ ನನ್ನ ಸಂತಾಪಗಳು. ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವಕರು ಹೃದಯ ಸ್ತಂಭನಕ್ಕೆ ಬಲಿಯಾಗುತ್ತಿರುವ ಇತ್ತೀಚಿನ ಘಟನೆಗಳು ಆರೋಗ್ಯ ಜಾಗೃತಿಯ ಮಹತ್ವವನ್ನು ಒತ್ತಿಹೇಳುತ್ತವೆ. ಹೀಗಾಗಿ ಹೃದಯದ ಆರೋಗ್ಯದ ಬಗ್ಗೆ ನಾವು ಜಾಗರೂಕರಾಗಿರಬೇಕು ಎಂದು ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com