
ಇಟಾನಗರ: ಚುನಾವಣೆಗೆ ಮುನ್ನ ಅರುಣಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಗೆ ಬಲ ತುಂಬುವ ನಿಟ್ಟಿನಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಯ ಹಲವು ಶಾಸಕರು ಭಾನುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
60 ಸದಸ್ಯರ ವಿಧಾನಸಭೆಯಲ್ಲಿ ಈಗ ಕಾಂಗ್ರೆಸ್ ಮತ್ತು ಎನ್‌ಪಿಪಿ ಎರಡೂ ತಲಾ ಇಬ್ಬರು ಶಾಸಕರನ್ನು ಹೊಂದಿವೆ.
ಹಿರಿಯ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಕೇಂದ್ರ ಸಚಿವ ನಿನೊಂಗ್ ಎರಿಂಗ್ ಮತ್ತು ವಾಂಗ್ಲಿನ್ ಲೋವಾಂಗ್‌ಡಾಂಗ್, ಮತ್ತು ಎನ್‌ಪಿಪಿಯ ಮುಚು ಮಿಥಿ ಮತ್ತು ಗೋಕರ್ ಬಾಸರ್ ಅವರು ಪ್ರಧಾನ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೇಸರಿ ಪಕ್ಷವನ್ನು ಸೇರಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪೆಮಾ ಖಂಡು, ರಾಜ್ಯ ಬಿಜೆಪಿ ಅಧ್ಯಕ್ಷ ಬಿಯೂರಾಮ್ ವಾಗೆ ಉಪಸ್ಥಿತರಿದ್ದರು. ಈ ವರ್ಷಾಂತ್ಯದಲ್ಲಿ ಈಶಾನ್ಯ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿವೆ.
Advertisement