UP Warriorz vs Delhi Capitals: 9 ವಿಕೆಟ್‌ಗಳಿಂದ ಯುಪಿ ವಾರಿಯರ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್

ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ರ ಎರಡನೇ ಆವೃತ್ತಿಯ ನಾಲ್ಕನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಯುಪಿ ವಾರಿಯರ್ಸ್ ತಂಡವನ್ನು ಒಂಬತ್ತು ವಿಕೆಟ್‌ಗಳ ಅಂತರದಿಂದ ಸೋಲಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಫಾಲಿ ವರ್ಮಾ ಬ್ಯಾಟಿಂಗ್ ವೈಖರಿ

ಟಾಸ್ ಗೆದ್ದ ಡೆಲ್ಲಿ ತಂಡವು ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟಿಂಗ್ ಮಾಡಿದ ಯುಪಿ ವಾರಿಯರ್ಸ್ ತಂಡವು ರಾಧಾ ಯಾದವ್ ಮತ್ತು ಕಾಪ್ ಅವರ ಆಕರ್ಷಕ ಬೌಲಿಂಗ್ ದಾಳಿಯ ಮುಂದೆ ಮಂಕಾಯಿತು. ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 119 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಯುಪಿ ವಾರಿಯರ್ಸ್ ತಂಡ ನೀಡಿದ 120 ರನ್ ಗುರಿ ಬೆನ್ನತ್ತಿದ ಡೆಲ್ಲಿ ತಂಡವು ನಾಯಕಿ ಮೆಗ್ ಲ್ಯಾನಿಂಗ್ (51) ಮತ್ತು ಶಫಾಲಿ ವರ್ಮಾ (64) ಅವರ ಅರ್ಧಶತಕದ ನೆರವಿನನಿಂದ 14.3 ಓವರ್‌ಗಳಲ್ಲಿಯೇ 120 ರನ್‌ಗಳ ಗುರಿ ಸಾಧಿಸಿ ಗೆಲುವು ದಾಖಲಿಸಿತು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್

ಇದಕ್ಕೂ ಮೊದಲು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ದಕ್ಷಿಣ ಆಫ್ರಿಕಾದ ಮಾರಿಝನ್ನೆ ಕಾಪ್ ಅವರ ಗಮನಾರ್ಹ ಬೌಲಿಂಗ್ ಪ್ರದರ್ಶನದ ಸಹಾಯದಿಂದ ವಾರಿಯರ್ಸ್ ತಂಡವನ್ನು 20 ಓವರ್‌ಗಳಲ್ಲಿ 119 ರನ್‌ಗಳಿಗೆ ನಿರ್ಬಂಧಿಸಿತು. ಅವರು ಕೇವಲ 20 ರನ್‌ ನೀಡಿ ನಾಲ್ಕು ವಿಕೆಟ್‌ ಕಬಳಿಸಿದರು.

ಈ ಪಂದ್ಯಾವಳಿಯಲ್ಲಿ ಯುಪಿ ವಾರಿಯರ್ಸ್ ತಂಡವು ಸತತ ಎರಡನೇ ಸೋಲು ಕಂಡಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಂದ್ಯಾವಳಿಯ ಎರಡನೇ ಪಂದ್ಯದಲ್ಲಿ ಮೊದಲ ಗೆಲುವು ದಾಖಲಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com