ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ಬಿಸಿಸಿಐ ವಾರ್ಷಿಕ ಒಪ್ಪಂದದಿಂದ ಔಟ್

ರಣಜಿ ಟ್ರೋಫಿಯಲ್ಲಿ ಆಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ದೇಶನವನ್ನು ನಿರ್ಲಕ್ಷಿಸಿದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಬಿಸಿಸಿಐ ಕೇಂದ್ರ ಒಪ್ಪಂದದಿಂದ ಬುಧವಾರ ಹೊರಗಿಡಲಾಗಿದೆ.
ಶ್ರೇಯಸ್ ಅಯ್ಯರ್-ಇಶಾನ್ ಕಿಶನ್
ಶ್ರೇಯಸ್ ಅಯ್ಯರ್-ಇಶಾನ್ ಕಿಶನ್

ನವದೆಹಲಿ: ರಣಜಿ ಟ್ರೋಫಿಯಲ್ಲಿ ಆಡುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ದೇಶನವನ್ನು ನಿರ್ಲಕ್ಷಿಸಿದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಬಿಸಿಸಿಐ ಕೇಂದ್ರ ಒಪ್ಪಂದದಿಂದ ಬುಧವಾರ ಹೊರಗಿಡಲಾಗಿದೆ.

ಬಿಸಿಸಿಐ ಈ ವರ್ಷ ಕೇಂದ್ರ ಒಪ್ಪಂದ ಪಡೆದ ಆಟಗಾರರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಎ ಪ್ಲಸ್ ವಿಭಾಗದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಬಿಸಿಸಿಐನ ಕೇಂದ್ರ ಒಪ್ಪಂದದ ಅತ್ಯುನ್ನತ ಶ್ರೇಣಿಯಾಗಿದೆ.

ಆರ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಸೇರಿದಂತೆ ಆರು ಕ್ರಿಕೆಟಿಗರು ಎ ವಿಭಾಗದಲ್ಲಿ ಕಾಣಿಸಿಕೊಂಡಿದ್ದಾರೆ.

ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್ ಅವರು ಬಿ ಕೆಟಗರಿ ಗುತ್ತಿಗೆ ಪಡೆದಿದ್ದಾರೆ.

ಶ್ರೇಯಸ್ ಅಯ್ಯರ್-ಇಶಾನ್ ಕಿಶನ್
ಅಶಿಸ್ತಿನ ಕಾರಣ ತಂಡದಿಂದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಔಟ್? ರಾಹುಲ್ ದ್ರಾವಿಡ್ ಹೇಳಿದ್ದೇನು?

ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟಿದಾರ್ ಸೇರಿದಂತೆ 15 ಅಥ್ಲೀಟ್‌ಗಳಿಗೆ ಸಿ ಕೆಟಗರಿ ಗುತ್ತಿಗೆ ನೀಡಲಾಗಿದೆ.

"ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ವಾರ್ಷಿಕ ಒಪ್ಪಂದಗಳಿಗೆ ಪರಿಗಣಿಸಲಾಗಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ" ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೂಲಕ ನಾನಾ ಕಾರಣ ಹೇಳಿ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಿಂದ ಹೊರಗುಳಿದಿದ್ದ ಸ್ಟಾರ್‌ ಆಟಗಾರರಾದ ಶ್ರೇಯಸ್‌ ಅಯ್ಯರ್‌ ಮತ್ತು ಇಶಾನ್‌ ಕಿಶನ್‌ ಅವರಿಗೆ ಬಿಸಿ ಮುಟ್ಟಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com