2ನೇ ಟೆಸ್ಟ್: ಭಾರತದ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ, ಅಶ್ವಿನ್ ಬದಲಿಗೆ ಜಡೇಜಾಗೆ ಸ್ಥಾನ

ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ

ಕೇಪ್ ಟೌನ್: ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ 2ನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ಡೀನ್ ಎಲ್ಗಾರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆಫ್ರಿಕಾ ನಾಯಕ ಎಲ್ಗರ್ ಗೆ ಇದು ನಿವೃತ್ತಿ ಪಂದ್ಯವಾಗಿದ್ದು, ಇದು ಅವರ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದ ಅಂತಿಮ ಟೆಸ್ಟ್ ಪಂದ್ಯವಾಗಿದೆ.

ಭಾರತ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಆರ್ ಅಶ್ವಿನ್ ಬದಲಿಗೆ ರವೀಂದ್ರ ಜಡೇಜಾಗೆ ಸ್ಥಾನ ಕಲ್ಪಿಸಲಾಗಿದೆ. ಅಂತೆಯೇ  ಶಾರ್ದೂಲ್ ಠಾಕೂರ್ ಬದಲಿಗೆ ಮುಖೇಶ್ ಕುಮಾರ್ ಗೆ ಸ್ಥಾನ ಕಲ್ಪಿಸಲಾಗಿದೆ.

ಅಂತೆಯೇ ಆಫ್ರಿಕಾ ತಂಡದಲ್ಲಿ 3 ಬದಲಾವಣೆ ಮಾಡಲಾಗಿದ್ದು, ಟೆಂಬಾ ಬವುಮಾ ಬದಲಿಗೆ ಟ್ರಿಸ್ಟಾನ್ ಸ್ಟಬ್ಸ್‌ ಸ್ಥಾನ ಪಡೆದಿದ್ದು, ಇದು ಅವರ ಚೊಚ್ಚಲ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವಾಗಿದೆ. ಎನ್‌ಗಿಡಿ ಗಾಯಗೊಂಡಿರುವ ಕಾರಣ ಕೋಟ್‌ಜೀ ತಂಡ ಸೇರಿಕೊಂಡಿದ್ದು, ಸ್ಪಿನ್ನರ್ ಮಹಾರಾಜ್ ಕೂಡ ತಂಡ ಸೇರಿಕೊಂಡಿದ್ದಾರೆ.

ತಂಡಗಳು ಇಂತಿವೆ
ಭಾರತ:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ:
ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ಟೋನಿ ಡಿ ಜೊರ್ಜಿ, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಬೆಡಿಂಗ್ಹ್ಯಾಮ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ನಾಂದ್ರೆ ಬರ್ಗರ್, ಲುಂಗಿ ಎನ್ಗಿಡಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com