2ನೇ ಟೆಸ್ಟ್: 31 ವರ್ಷಗಳ ಬರ ನೀಗಿಸಿದ ಭಾರತ; ಕೇಪ್ ಟೌನ್‌ನಲ್ಲಿ ಐತಿಹಾಸಿಕ ಗೆಲುವು, ಸರಣಿ ಸಮಬಲ!

ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಗೆಲುವಿನೊಂದಿಗೆ ಕೊನೆಗೊಳಿಸಿದೆ. ಉಭಯ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯ ರೋಚಕವಾಗಿದ್ದು, ಎರಡೇ ದಿನಗಳಲ್ಲಿ ಫಲಿತಾಂಶ ಭಾರತ ತಂಡದ ಪರವಾಗಿದೆ. 
ಭಾರತ ತಂಡ
ಭಾರತ ತಂಡ
Updated on

ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಗೆಲುವಿನೊಂದಿಗೆ ಕೊನೆಗೊಳಿಸಿದೆ. ಉಭಯ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯ ರೋಚಕವಾಗಿದ್ದು, ಎರಡೇ ದಿನಗಳಲ್ಲಿ ಫಲಿತಾಂಶ ಭಾರತ ತಂಡದ ಪರವಾಗಿದೆ. 

ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಏಳು ವಿಕೆಟ್ ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಕೇಪ್ ಟೌನ್ ನಲ್ಲಿ ತನ್ನ 31 ವರ್ಷಗಳ ಬರವನ್ನು ಕೊನೆಗೊಳಿಸಿದೆ.

ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ದಾಖಲೆ ತೀರಾ ಕಳಪೆಯಾಗಿತ್ತು. ಈ ಮೈದಾನದಲ್ಲಿ ಟೀಂ ಇಂಡಿಯಾ 6 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ ಪೈಕಿ ಭಾರತ ತಂಡ 4 ಪಂದ್ಯಗಳಲ್ಲಿ ಸೋಲು ಅನುಭವಿಸಬೇಕಾಯಿತು. ಅದೇ ಸಮಯದಲ್ಲಿ, 2 ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿತ್ತು. 

ಅಂದರೆ, 1993ರಿಂದ 2022ರ ಪ್ರವಾಸದಲ್ಲಿ ಟೀಮ್ ಇಂಡಿಯಾ ಇಲ್ಲಿ ಒಂದು ಟೆಸ್ಟ್ ಪಂದ್ಯವನ್ನು ಗೆದ್ದಿಲ್ಲ. ಆದರೆ ಈ ಬಾರಿ ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ 31 ವರ್ಷಗಳ ಬರವನ್ನು ಕೊನೆಗೊಳಿಸಿದೆ.

ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾದ ಪ್ರದರ್ಶನ
ಜನವರಿ 1993 - ಪಂದ್ಯ ಡ್ರಾ ಆಗಿತ್ತು
ಜನವರಿ 1997 - ದಕ್ಷಿಣ ಆಫ್ರಿಕಾ 282 ರನ್‌ಗಳಿಂದ ಗೆದ್ದಿತ್ತು
ಜನವರಿ 2007 - ದಕ್ಷಿಣ ಆಫ್ರಿಕಾ 5 ವಿಕೆಟ್‌ಗಳ ಜಯ
ಜನವರಿ 2011 - ಪಂದ್ಯ ಡ್ರಾ ಆಗಿತ್ತು
ಜನವರಿ 2018 - ದಕ್ಷಿಣ ಆಫ್ರಿಕಾ 72 ರನ್‌ಗಳಿಂದ ಗೆದ್ದಿತು
ಜನವರಿ 2022 - ದಕ್ಷಿಣ ಆಫ್ರಿಕಾ 7 ವಿಕೆಟ್‌ಗಳಿಂದ ಗೆದ್ದಿತು
ಜನವರಿ 2024 - ಭಾರತವು ವಿಕೆಟ್‌ಗಳಿಂದ ಗೆಲುವು

ಇದು ಕೇಪ್ ಟೌನ್ ಟೆಸ್ಟ್‌ನ ಸ್ಥಿತಿ
ಕೇಪ್ ಟೌನ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 55 ರನ್ ಗಳಿಗೆ ಆಲೌಟ್ ಮಾಡಿತ್ತು. ಆದರೆ ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ ಹೆಚ್ಚು ಮಾಡಲು ಸಾಧ್ಯವಾಗದೆ 153 ರನ್‌ಗಳಿಗೆ ಆಲೌಟ್ ಆಯಿತು. ಇದಾದ ಬಳಿಕ ದಕ್ಷಿಣ ಆಫ್ರಿಕಾ ತಂಡ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 176 ರನ್ ಗಳಿಗೆ ಆಲೌಟ್ ಆಗಿ ಭಾರತಕ್ಕೆ 79 ರನ್ ಗಳ ಗೆಲುವಿನ ಗುರಿ ನೀಡಿದೆ. ಈ ಗುರಿಯನ್ನು ಭಾರತ 3 ವಿಕೆಟ್ ನಷ್ಟದಲ್ಲಿ ಸಾಧಿಸಿತು.

ಮೊದಲ ಟೆಸ್ಟ್‌ನಲ್ಲಿ ಭಾರತಕ್ಕೆ ಹೀನಾಯ ಸೋಲು
ಭಾರತ ವಿರುದ್ಧ ಸೆಂಚುರಿಯನ್ ಟೆಸ್ಟ್ ಪಂದ್ಯದ ಮೂರನೇ ದಿನ ದಕ್ಷಿಣ ಆಫ್ರಿಕಾ ಗೆದ್ದಿತ್ತು. ಈ ಪಂದ್ಯದಲ್ಲಿ ಭಾರತವನ್ನು ದಕ್ಷಿಣ ಆಫ್ರಿಕಾ ಇನಿಂಗ್ಸ್ ಮತ್ತು 32 ರನ್‌ಗಳಿಂದ ಸೋಲಿಸಿತು. ಆದರೆ ಎರಡನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಅದ್ಭುತ ಪುನರಾಗಮನವನ್ನು ಮಾಡಿದೆ. ಕೇಪ್ ಟೌನ್ ಟೆಸ್ಟ್ ಅನ್ನು ಗೆದ್ದು ಸರಣಿಯನ್ನು ಸಮನಾಗಿ ಕೊನೆಗೊಳಿಸಿದೆ. ಆದರೆ, ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಕನಸು ಈ ಬಾರಿಯೂ ಕನಸಾಗಿಯೇ ಉಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com