ಅಪ್ಘಾನಿಸ್ತಾನ ವಿರುದ್ಧದ ಟಿ-20 ಸರಣಿ: ರೋಹಿತ್ ನಾಯಕತ್ವದ ಟೀಂ ಇಂಡಿಯಾ ಪ್ರಕಟ

ಮುಂಬರುವ ಅಪ್ಘಾನಿಸ್ತಾನ ವಿರುದ್ಧದ ಟಿ-20 ಅಂತಾರಾಷ್ಟ್ರೀಯ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಜನವರಿ 11 ರಂದು ಮೊದಲ ಪಂದ್ಯ ಆರಂಭವಾಗಲಿದೆ. ರೋಹಿತ್ ಶರ್ಮಾ ಭಾರತ ತಂಡದ ನಾಯಕರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮುಂಬರುವ ಅಪ್ಘಾನಿಸ್ತಾನ ವಿರುದ್ಧದ ಟಿ-20 ಅಂತಾರಾಷ್ಟ್ರೀಯ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಜನವರಿ 11 ರಂದು ಮೊದಲ ಪಂದ್ಯ ಆರಂಭವಾಗಲಿದೆ. ರೋಹಿತ್ ಶರ್ಮಾ ಭಾರತ ತಂಡದ ನಾಯಕರಾಗಿದ್ದಾರೆ.

ವಿರಾಟ್ ಕೊಹ್ಲಿ ಮೂರು ಪಂದ್ಯಗಳಲ್ಲಿಯೂ ಆಡಲಿದ್ದು, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಎರಡನೇ ಟಿ20 ಜನವರಿ 14 ರಂದು ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮತ್ತು ಮೂರನೇ ಟಿ20 ಜನವರಿ 17 ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.

ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ) ಶುಭ್ ಮನ್  ಗಿಲ್,  ವೈ. ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್) ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಶಿವಂ ದುಬೆ, ಡಬ್ಲ್ಯು ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com