3ನೇ ಟಿ20 ಪಂದ್ಯ: ಭಾರತ ಮಹಿಳಾ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿ ಸರಣಿ ಗೆದ್ದ ಆಸ್ಟ್ರೇಲಿಯಾ!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಭಾರತವನ್ನು 7 ವಿಕೆಟ್ ಗಳಿಂದ ಮಣಿಸಿ ಸರಣಿ ಕೈವಶ ಮಾಡಿಕೊಂಡಿದೆ.
ಆಸ್ಟ್ರೇಲಿಯಾ ತಂಡ
ಆಸ್ಟ್ರೇಲಿಯಾ ತಂಡ

ಮುಂಬೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಭಾರತವನ್ನು 7 ವಿಕೆಟ್ ಗಳಿಂದ ಮಣಿಸಿ ಸರಣಿ ಕೈವಶ ಮಾಡಿಕೊಂಡಿದೆ.

ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ 7 ವಿಕೆಟ್‌ಗಳಿಂದ ಗೆದ್ದು ಸರಣಿಯನ್ನು 2-1 ರಿಂದ ವಶಪಡಿಸಿಕೊಂಡಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತ 147 ರನ್ ಗಳಿಗೆ ಆಲೌಟ್ ಆಗಿತ್ತು. ಭಾರತ ನೀಡಿದ 148 ರನ್ ಗುರಿ ಬೆನ್ನಟ್ಟಿದ ಕಾಂಗರೂ ತಂಡ 18.4 ಓವರ್ ಗಳಲ್ಲಿ 149 ರನ್ ಬಾರಿಸಿ ಗೆಲುವಿನ ನಗೆ ಬೀರಿತು.  

ಆಸ್ಟ್ರೇಲಿಯಾ ತಂಡದ ನಾಯಕಿ ಅಲಿಸಾ ಹೀಲಿ (38 ಎಸೆತಗಳಲ್ಲಿ 55 ರನ್, 9 ಬೌಂಡರಿ, 1 ಸಿಕ್ಸರ್) ಮತ್ತು ಬೆತ್ ಮೂನಿ (45 ಎಸೆತಗಳಲ್ಲಿ ಔಟಾಗದೆ 52, 5 ಬೌಂಡರಿ) ಅರ್ಧಶತಕಗಳ ಆಟವಾಡಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 85 ರನ್‌ಗಳ ಜೊತೆಯಾಟ ನೀಡಿದರು. ತಹ್ಲಿಯಾ ಮೆಕ್‌ಗ್ರಾತ್ 20 ಮತ್ತು ಫೋಬೆ ಲಿಚ್‌ಫೀಲ್ಡ್ ಔಟಾಗದೆ 17 ರನ್ ಗಳಿಸಿದರು. ಆಲಿಸ್ ಪೆರಿಯ ಖಾತೆ ತೆರೆದಿಲ್ಲ. ಭಾರತದ ಪರ ಪೂಜಾ ವಸ್ತ್ರಾಕರ್ ಎರಡು ಹಾಗೂ ದೀಪ್ತಿ ಶರ್ಮಾ ಒಂದು ವಿಕೆಟ್ ಪಡೆದರು.

ಟಾಸ್ ಸೋತ ಭಾರತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು. ರಿಚಾ ಘೋಷ್ ಆತಿಥೇಯ ತಂಡದ ಪರ ಗರಿಷ್ಠ ರನ್ ಗಳಿಸಿದರು. 28 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ 34 ರನ್‌ಗಳ ಮಹತ್ವದ ಇನಿಂಗ್ಸ್‌ ಆಡಿದರು. ಸ್ಮೃತಿ ಮಂಧಾನ 29 ರನ್, ಶೆಫಾಲಿ ವರ್ಮಾ 26 ರನ್ ಮತ್ತು ದೀಪ್ತಿ ಶರ್ಮಾ 14 ರನ್ ಕೊಡುಗೆ ನೀಡಿದರು. ಅಮನ್ಜೋತ್ ಕೌರ್ 17 ರನ್ ಮತ್ತು ಪೂಜಾ ವಸ್ತ್ರಾಕರ್ 7 ರನ್ ಗಳಿಸಿ ಅಜೇಯರಾಗಿ ಉಳಿದರು. ಆಸ್ಟ್ರೇಲಿಯಾ ಪರ ಅನ್ನಾಬೆಲ್ ಸದರ್‌ಲ್ಯಾಂಡ್ ಮತ್ತು ಜಾರ್ಜಿಯಾ ವೇರ್‌ಹ್ಯಾಮ್ ತಲಾ ಎರಡು ವಿಕೆಟ್ ಪಡೆದರೆ, ಮೇಗನ್ ಶುಟ್ ಮತ್ತು ಆಶ್ಲೇ ಗಾರ್ಡ್ನರ್ ತಲಾ ಒಂದು ವಿಕೆಟ್ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com