ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ; ಪ್ರಶಸ್ತಿ ಪಡೆಯುವುದು ನನ್ನ ಕನನಸಾಗಿತ್ತು ಎಂದ ಮೊಹಮ್ಮದ್ ಶಮಿ

ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರ್ಜುನ ಪ್ರಶಸ್ತಿಯನ್ನು ನೀಡಿದರು. 2023ರ ಏಕದಿನ ವಿಶ್ವಕಪ್‌ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು.
ಮೊಹಮ್ಮದ್ ಶಮಿ
ಮೊಹಮ್ಮದ್ ಶಮಿ

ನವದೆಹಲಿ: ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರ್ಜುನ ಪ್ರಶಸ್ತಿಯನ್ನು ನೀಡಿದರು. 2023ರ ಏಕದಿನ ವಿಶ್ವಕಪ್‌ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು.

ಕೇವಲ 7 ಪಂದ್ಯಗಳಿಂದ 24 ವಿಕೆಟ್ ಕಬಳಿಸುವ ಮೂಲಕ ಶಮಿ 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಬೌಲರ್ ಆಗಿ ಮಿಂಚಿದ್ದರು. 

'ಈ ಪ್ರಶಸ್ತಿ ಪಡೆಯುವುದೇ ಪ್ರತಿಯೊಬ್ಬ ಆಟಗಾರರ ಜೀವನದ ಕನಸಾಗಿರುತ್ತದೆ. ನಾನು ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಕ್ಕೆ ಸಂತೋಷವಾಗಿದೆ. ನನ್ನ ಜೀವದಲ್ಲಿ ಈ ಪ್ರಶಸ್ತಿಯನ್ನು ಪಡೆದ ಅನೇಕರನ್ನು ನೋಡಿದ್ದೇನೆ. ನಾನು ಕೂಡ ಪ್ರಶಸ್ತಿ ಪಡೆಯಬೇಕೆಂಬ ಕನಸು ನನ್ನದಾಗಿತ್ತು. ಇದೀಗ ನನಗೂ ಪ್ರಶಸ್ತಿ ಸಿಕ್ಕಿರುವುದು ಸಂತಸ ನೀಡಿದೆ' ಎಂದು ಕ್ರಿಕೆಟಿಗ ಶಮಿ ಎಎನ್‌ಐಗೆ ತಿಳಿಸಿದ್ದಾರೆ.

<strong>ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಪ್ಯಾರಾ ಆರ್ಚರ್ ಶೀತಲ್ ದೇವಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು.</strong>
ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಪ್ಯಾರಾ ಆರ್ಚರ್ ಶೀತಲ್ ದೇವಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ವಿಶ್ವಕಪ್ 2023 ರಲ್ಲಿ ಮೊದಲಿಗೆ ಮೊಹಮ್ಮದ್ ಶಮಿ ಅವರನ್ನು ನಾಲ್ಕು ಪಂದ್ಯಗಳಿಂದ ಹೊರಗಿಡಲಾಗಿತ್ತು. 19ರಂದು ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರು ಗಾಯಗೊಂಡ ಬಳಿಕ ಶಮಿ ಪ್ಲೇಯಿಂಗ್ XIನಲ್ಲಿ ಸ್ಥಾನ ಪಡೆದಿದ್ದರು. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಪರ 5 ವಿಕೆಟ್‌ಗಳನ್ನು ಪಡೆದು ಗೆಲುವಿಗೆ ಕಾರಣರಾಗಿದ್ದರು. ಶಮಿ ಈ ಟೂರ್ನಿಯಲ್ಲಿ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗಿಂತ ಹೆಚ್ಚು ಅಂದರೆ 24 ವಿಕೆಟ್‌ಗಳನ್ನು ಗಳಿಸಿ ಬೇಷ್ ಎನ್ನಿಸಿಕೊಂಡಿದ್ದರು.

2023 ರಲ್ಲಿ ಒಟ್ಟು 26 ಅಥ್ಲೀಟ್‌ಗಳು ತಮ್ಮ ಅತ್ಯುತ್ತಮ ಪ್ರದರ್ಶನಕ್ಕಾಗಿ ಅರ್ಜುನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಈ ಪಟ್ಟಿಯಲ್ಲಿ 2023ರ ಏಷ್ಯನ್ ಗೇಮ್ಸ್‌ನ ಅಥ್ಲೀಟ್‌ಗಳೇ ಪ್ರಾಬಲ್ಯ ಸಾಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com