ಅಶಿಸ್ತಿನ ಕಾರಣ ತಂಡದಿಂದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಔಟ್? ರಾಹುಲ್ ದ್ರಾವಿಡ್ ಹೇಳಿದ್ದೇನು?

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಆಡದಿರುವ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಸ್ಪಷ್ಟನೆ ನೀಡಿದ್ದಾರೆ. 
ಶ್ರೇಯಸ್ ಅಯ್ಯರ್-ಇಶಾನ್ ಕಿಶನ್
ಶ್ರೇಯಸ್ ಅಯ್ಯರ್-ಇಶಾನ್ ಕಿಶನ್

ಮೊಹಾಲಿ: ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಆಡದಿರುವ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಸ್ಪಷ್ಟನೆ ನೀಡಿದ್ದಾರೆ. 

ಮಾಧ್ಯಮ ವರದಿಗಳ ಪ್ರಕಾರ, ಅಶಿಸ್ತಿನ ಕಾರಣದಿಂದ ಇಶಾನ್ ಮತ್ತು ಅಯ್ಯರ್ ಅವರನ್ನು ಟೀಂ ಇಂಡಿಯಾದ ತಂಡದಲ್ಲಿ ಸೇರಿಸಿಕೊಳ್ಳಲಾಗಿಲ್ಲ ಎಂದು ಮಾತುಕತೆಗಳು ನಡೆದಿವೆ. ಆದರೆ ಕೋಚ್ ರಾಹುಲ್ ದ್ರಾವಿಡ್ ಅಂತಹ ಎಲ್ಲಾ ವರದಿಗಳನ್ನು ನಿರಾಕರಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ಆರಂಭಕ್ಕೂ ಮುನ್ನ ರಾಹುಲ್ ದ್ರಾವಿಡ್ ಈ ರೀತಿ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

ಇಶಾನ್ ಕಿಶನ್ ಬಗ್ಗೆ ರಾಹುಲ್ ದ್ರಾವಿಡ್, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಇಶಾನ್ ವಿಶ್ರಾಂತಿಗಾಗಿ ವಿರಾಮ ತೆಗೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ಅವರು ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಲಭ್ಯರಿಲ್ಲ. ಅವರ ವಿರುದ್ಧ ಯಾವುದೇ ರೀತಿಯ ಅಶಿಸ್ತಿನ ಕ್ರಮ ಕೈಗೊಂಡಿಲ್ಲ ಎಂದರು.

ಇಶಾನ್ ಕಿಶನ್ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಮಂಡಳಿಯಿಂದ ಅನುಮತಿ ಪಡೆದಿದ್ದರು. ಅವರು ದುಬೈನಲ್ಲಿ ಪಾರ್ಟಿ ಮಾಡುತ್ತಿರುವುದು ಕಂಡುಬಂದಿದೆ. ಹೀಗಿರುವಾಗ ಅಫ್ಘಾನಿಸ್ತಾನ ವಿರುದ್ಧದ ತಂಡವನ್ನು ಪ್ರಕಟಿಸಿದಾಗ ಅದರಲ್ಲಿ ಇಶಾನ್ ಹೆಸರು ಇರಲಿಲ್ಲ.

ಇಶಾನ್ ದಕ್ಷಿಣ ಆಫ್ರಿಕಾ ಪ್ರವಾಸದಿಂದ ವಿರಾಮ ತೆಗೆದುಕೊಳ್ಳುವುದಾಗಿ ಘೋಷಿಸಿದ್ದರು. ಈ ಕಾರಣಕ್ಕಾಗಿಯೇ ಇಶಾನ್ ತನ್ನ ಕುಟುಂಬದೊಂದಿಗೆ ಸಮಯ ಕಳೆಯಲು ಬಿಡುವು ಮಾಡಿಕೊಂಡಿದ್ದಾರೆ. ಆದರೆ ಅವರು ಪಾರ್ಟಿ ಮಾಡುತ್ತಿದ್ದ ಕಾರಣ ಅವರ ವಿರುದ್ಧ ಅಶಿಸ್ತಿನ ಕಾರಣಕ್ಕಾಗಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಹರಡಿತ್ತು.

ಮತ್ತೊಂದೆಡೆ, ಶ್ರೇಯಸ್ ಅಯ್ಯರ್ ಬಗ್ಗೆ, ರಾಹುಲ್ ದ್ರಾವಿಡ್ ತಂಡದಲ್ಲಿ ಅನೇಕ ಬ್ಯಾಟ್ಸ್‌ಮನ್‌ಗಳು ಇರುವುದರಿಂದ ಅವರಿಗೆ ಸ್ಥಾನವನ್ನು ನೀಡಲು ಸಾಧ್ಯವಾಗಲಿಲ್ಲ ಎಂದು ಹೇಳುತ್ತಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಹಿರಿಯ ಆಟಗಾರರು ಅಫ್ಘಾನಿಸ್ತಾನ ವಿರುದ್ಧ ಮರಳಿದ್ದಾರೆ. ಆದರೆ, ಸರಣಿ ಆರಂಭಕ್ಕೆ ಕೆಲವೇ ಗಂಟೆಗಳ ಮೊದಲು ವಿರಾಟ್ ವೈಯಕ್ತಿಕ ಕಾರಣ ನೀಡಿ ಮೊದಲ ಟಿ20 ಪಂದ್ಯದಲ್ಲಿ ಆಡದಿರಲು ನಿರ್ಧರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com