ಮಹೇಂದ್ರ ಸಿಂಗ್ ಧೋನಿ ವಿರುದ್ಧ ಮಾಜಿ ಬಿಸಿನೆಸ್ ಪಾರ್ಟ್‌ನರ್ ಗಳಿಂದ ಮಾನನಷ್ಟ ಮೊಕದ್ದಮೆ ದಾಖಲು

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಇಬ್ಬರು ಮಾಜಿ ಉದ್ಯಮಿ ಪಾಲುದಾರರು ದೆಹಲಿ ಹೈಕೋರ್ಟ್‌ನಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಮಹೇಂದ್ರ ಸಿಂಗ್ ಧೋನಿ
ಮಹೇಂದ್ರ ಸಿಂಗ್ ಧೋನಿ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಇಬ್ಬರು ಮಾಜಿ ಉದ್ಯಮಿ ಪಾಲುದಾರರು ದೆಹಲಿ ಹೈಕೋರ್ಟ್‌ನಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಾನನಷ್ಟ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಅವರ ಮುಂದೆ ನಾಳೆ ವಿಚಾರಣೆಗೆ ಬರಲಿದೆ. ಹಲವಾರು ಸಾಮಾಜಿಕ ಮಾಧ್ಯಮಗಳು ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಶಾಶ್ವತ ತಡೆಯಾಜ್ಞೆ ಮತ್ತು ಹಾನಿಯನ್ನು ಕೋರಿ ಮಾಜಿ ಉದ್ಯಮಿ ಪಾಲುದಾರರಾದ ಮಿಹಿರ್ ದಿವಾಕರ್ ಮತ್ತು ಅವರ ಪತ್ನಿ ಸೌಮ್ಯಾ ದಾಸ್ ಅವರು ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಆ ಮೂಲಕ ಮಾನಹಾನಿಕರ ಮತ್ತು ಸುಳ್ಳು ಸುದ್ದಿ ಪ್ರಸಾರ ಮಾಡುವುದನ್ನು ನಿರ್ಬಂಧಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ. 

15 ಕೋಟಿ ರೂಪಾಯಿ ಅಕ್ರಮ ಗಳಿಕೆ ಮತ್ತು 2017 ರ ಒಪ್ಪಂದದ ಉಲ್ಲಂಘನೆಗೆ ಕುರಿತು ಧೋನಿ ಸುಳ್ಳು ಆಪಾದನೆ ಮಾಡುತ್ತಿದ್ದು, ಫಿರ್ಯಾದಿದಾರರ ಪ್ರತಿಷ್ಠೆಗೆ ಹಾನಿ ಮಾಡದಂತೆ ಪ್ರತಿವಾದಿಗಳನ್ನು ನಿರ್ಬಂಧಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ, ಧೋನಿ ಅವರು ದಿವಾಕರ್ ಮತ್ತು ಸೌಮ್ಯ ದಾಸ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿದ್ದರು. ಅವರು ಕ್ರಿಕೆಟ್ ಅಕಾಡೆಮಿಗಳನ್ನು ಸ್ಥಾಪಿಸುವ ಒಪ್ಪಂದವನ್ನು ಗೌರವಿಸದೆ ಸುಮಾರು 16 ಕೋಟಿ ರೂಪಾಯಿಗಳನ್ನು ವಂಚಿಸಿದ್ದಾರೆ ಎಂದು ಅವರ ವಕೀಲರು ಆರೋಪಿಸಿದ್ದರು. ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್ ಕಂಪನಿಯಾದ ಆರ್ಕಾ ಸ್ಪೋರ್ಟ್ಸ್‌ನ ಇಬ್ಬರು ನಿರ್ದೇಶಕರ ವಿರುದ್ಧ ರಾಂಚಿಯ ಕೆಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 406 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಮತ್ತು 420 (ವಂಚನೆ) ಅಡಿಯಲ್ಲಿ ಆರ್ಕಾ ಸ್ಪೋರ್ಟ್ಸ್ ನಿರ್ದೇಶಕರಾದ ಮಿಹಿರ್ ದಿವಾಕರ್ ಮತ್ತು ಸೌಮ್ಯ ದಾಸ್ ವಿರುದ್ಧ ರಾಂಚಿಯ ಸಕ್ಷಮ ನ್ಯಾಯಾಲಯದಲ್ಲಿ ಧೋನಿಯವರ ಪರವಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದೇವೆ ಎಂದು ಧೋನಿಯವರ ಪ್ರತಿನಿಧಿಗಳು ತಿಳಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com