ಮುಂಬೈನಲ್ಲಿ ಟೀಮ್ ಇಂಡಿಯಾ ವಿಜಯೋತ್ಸವ ಪರೇಡ್ ಗೆ ಉಚಿತ ಪ್ರವೇಶ

ಮುಂಬೈ: ಐಸಿಸಿ ಟಿ20 ವಿಶ್ವಕಪ್ ಗೆದ್ದಿರುವ ಭಾರತೀಯ ಕ್ರಿಕೆಟ್ ತಂಡ ಮುಂಬೈನಲ್ಲಿ ಅದ್ಧೂರಿ ವಿಜಯೋತ್ಸವ ಮೆರವಣಿಗೆ ನಡೆಸಲಿದ್ದು, ಈ ಸಂಭ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಅಜಿಂಕ್ಯ ನಾಯ್ಕ್ ಅವರು ಗುರುವಾರ ಹೇಳಿದ್ದಾರೆ.
ಇಂದು ಬೆಳಗ್ಗೆ ದೆಹಲಿಯಲ್ಲಿ ಸಂಭ್ರಮಾಚರಣೆ ಮುಗಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ರೋಹಿತ್ ಶರ್ಮಾ ನೇತೃತ್ವದ ತಂಡ ಮುಂಬೈಗೆ ತೆರಳಲಿದೆ.
ಮುಂಬೈನಲ್ಲಿ ಸಂಜೆ 5 ಗಂಟೆಯಿಂದ ಮರೈನ್ ಡ್ರೈವ್‌ನ ಉದ್ದಕ್ಕೂ ತೆರೆದ ಬಸ್ ನಲ್ಲಿ ಭಾರತ ತಂಡದ ವಿಜಯೋತ್ಸವ ಮೆರವಣಿಗೆ ಸಾಗಲಿದ್ದು, ವಾಂಖೆಡೆ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳುತ್ತದೆ.
ಈ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಮುಂಬೈ ಪೊಲೀಸ್ ಮತ್ತು ಬಿಸಿಸಿಐ ಸಹಯೋಗದೊಂದಿಗೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ನಾಯಕ್ ತಿಳಿಸಿದ್ದಾರೆ.
"ಮುಂಬೈ ಪೊಲೀಸ್ ಮತ್ತು ಬಿಸಿಸಿಐ ಮಾರ್ಗದರ್ಶನದಲ್ಲಿ, ನಾವು ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದ ಮೇಲೆ ಸಾರ್ವಜನಿಕರಿಗೆ ಉಚಿತ ಪ್ರವೇಶವನ್ನು ನೀಡುತ್ತಿದ್ದೇವೆ. ಈ ಸಂಬಂಧ ನಾವು ನಿನ್ನೆ ಮುಂಬೈ ಪೊಲೀಸರೊಂದಿಗೆ ಸಭೆ ನಡೆಸಿದ್ದೇವೆ ಮತ್ತು ಎಂಸಿಎ ಗರಿಷ್ಠ ಪೊಲೀಸ್ ಉಪಸ್ಥಿತಿಗೆ ವ್ಯವಸ್ಥೆ ಮಾಡಿದೆ. ಎಂಸಿಎ ಮತ್ತು ದೇಶಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತ ತಂಡವನ್ನು ಸ್ವಾಗತಿಸಲು ನಾವು ಉತ್ಸುಕರಾಗಿದ್ದೇವೆ ಎಂದು ನಾಯಕ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



