ಚಾಂಪಿಯನ್ಸ್ ಟ್ರೋಫಿ, WTC ಫೈನಲ್ ಗೆ ರೋಹಿತ್ ಶರ್ಮಾ ಭಾರತದ ನಾಯಕ!

ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಜೂನ್ 2025 ರಲ್ಲಿ ಲಾರ್ಡ್ಸ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಫ್ ಫೈನಲ್‌ನಲ್ಲಿ ರೋಹಿತ್ ಶರ್ಮಾ ಭಾರತವನ್ನು ಮುನ್ನಡೆಸಲಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ನವದೆಹಲಿ: ಟಿ20 ವಿಶ್ವಕಪ್ ಗೆದ್ದ ನಂತರ ಭಾರತ ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ನಲ್ಲಿ ಜಯಭೇರಿ ಬಾರಿಸಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭಾನುವಾರ ಹೇಳಿದ್ದಾರೆ.

ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಜೂನ್ 2025 ರಲ್ಲಿ ಲಾರ್ಡ್ಸ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಫ್ ಫೈನಲ್‌ನಲ್ಲಿ ರೋಹಿತ್ ಶರ್ಮಾ ಭಾರತವನ್ನು ಮುನ್ನಡೆಸಲಿದ್ದಾರೆ ಎಂದು ಶಾ ಖಚಿತಪಡಿಸಿದ್ದಾರೆ.

ರೋಹಿತ್ ಶರ್ಮಾ
2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಪಾಕಿಸ್ತಾನ ಆಯೋಜನೆ; ಮೂರು ಐಸಿಸಿ ಟೂರ್ನಿಗಳಿಗೆ ಭಾರತ ಆತಿಥ್ಯ

ಇತ್ತೀಚೆಗೆ ಬಾರ್ಬಡೋಸ್‌ನಲ್ಲಿ ನಡೆದ T20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್‌ಗಳ ರೋಚಕ ಜಯದ ನಂತರ ಭಾರತವು ಐಸಿಸಿ ಪಂದ್ಯಾವಳಿಗಳಲ್ಲಿ ಪ್ರಶಸ್ತಿ ಬರವನ್ನು ಕೊನೆಗೊಳಿಸಿತು. "ಟಿ20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಅಭಿನಂದಿಸಲು ಬಯಸುತ್ತೇನೆ. ನಮ್ಮ ಮುಂದಿನ ಗುರಿ ಚಾಂಪಿಯನ್ಸ್ ಟ್ರೋಫಿ ಮತ್ತು WTC ಫೈನಲ್. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಎರಡೂ ಪಂದ್ಯಾವಳಿಗಳಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ರೋಹಿತ್ ಶರ್ಮಾ
ವಿಶ್ವಕಪ್ ಗೆದ್ದ ಬೆನ್ನಲ್ಲೇ ಜಿಂಬಾಬ್ವೆ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಹೀನಾಯವಾಗಿ ಸೋತ ಟೀಂ ಇಂಡಿಯಾ!

ಕುತೂಹಲಕಾರಿವೆಂದರೆ, 2017 ರ ನಂತರ ಮೊದಲ ಬಾರಿಗೆ ಪಾಕಿಸ್ತಾನದಲ್ಲಿ ನಡೆಯುತ್ತಿರುವ ICC ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಭಾಗವಹಿಸುತ್ತದೆಯೇ ಎಂಬುದನ್ನು ಇನ್ನೂ ಖಚಿತಪಡಿಸಿಲ್ಲ. ಹದಗೆಟ್ಟ ರಾಜಕೀಯ ಸಂಬಂಧಗಳ ಕಾರಣ ಭಾರತವು 2008 ರಿಂದ ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ. ಕ್ರಿಕೆಟ್ ಅಭಿಮಾನಿಗಳು ಹೆಚ್ಚಿರುವ ಈ ಎರಡೂ ದೇಶಗಳು ಬಹು ತಂಡಗಳ ಟೂರ್ನಿಗಳಲ್ಲಿ ಮಾತ್ರ ಆಡುತ್ತವೆ.

ಕಳೆದ ವರ್ಷ ಪಾಕಿಸ್ತಾನ ಏಷ್ಯಾ ಕಪ್ ಆಯೋಜಿಸಿತ್ತು ಆದರೆ ಅಂತಿಮವಾಗಿ ವಿಜೇತರಾದ ಭಾರತಕ್ಕೆ ಶ್ರೀಲಂಕಾದಲ್ಲಿ ತಮ್ಮ ಎಲ್ಲಾ ಪಂದ್ಯಗಳನ್ನು ಆಡಲು ಅವಕಾಶ ನೀಡಲಾಗಿತ್ತು. ಪಾಕಿಸ್ತಾನ ಪ್ರವಾಸ ಮಾಡಲು ತಮ್ಮ ಸರ್ಕಾರದಿಂದ ಅನುಮತಿ ಪಡೆದಿರಲಿಲ್ಲ ಎಂದು ಭಾರತ ಹೇಳಿತ್ತು. ಪಾಕಿಸ್ತಾನದ ಕ್ರಿಕೆಟ್ ಮಂಡಳಿ 2025 ರ ಚಾಂಪಿಯನ್ಸ್ ಟ್ರೋಫಿಗಾಗಿ ಲಾಹೋರ್‌ನ ಗಡಾಫಿ ಕ್ರೀಡಾಂಗಣವನ್ನು ಸಜ್ಜುಗೊಳಿಸುತ್ತಿದೆ. ಫೆಬ್ರವರಿ 19 ಮತ್ತು ಮಾರ್ಚ್ 5 ರ ನಡುವೆ ಪಂದ್ಯಾವಳಿಯನ್ನು ಆಯೋಜಿಸಲು ಪ್ರಸ್ತಾಪಿಸಿದೆ. ಭಾರತವು 2021 ಮತ್ತು 2023 ರಲ್ಲಿ ನಡೆದ ICC WTC ಫೈನಲ್‌ನಲ್ಲಿ ರನ್ನರ್‌ ಅಫ್ ಆಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com