
ಹರಾರೆ: ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್ ಗಳಿಂದ ಗೆಲುವು ಸಾಧಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ.
ಹರಾರೆಯಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಜಿಂಬಾಬ್ವೆ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 152 ರನ್ ಪೇರಿಸಿತ್ತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ ಅಜೇಯ 58 ಹಾಗೂ ಯಶಸ್ವಿ ಜೈಸ್ವಾಲ್ ಅಜೇಯ 93 ರನ್ ಗಳ ನೆರವಿನಿಂದ ಭಾರತ ಇನ್ನು 28 ಏಸೆತ ಇರುವಂತೆ 156 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಜಿಂಬಾಬ್ವೆ ಪರ ವೆಸ್ಲಿ ಮಾಧೆವೆರೆ 25, ತಡಿವಾನಾಶೆ ಮರುಮಣಿ 32, ಬ್ರಿಯಾನ್ ಬೆನೆಟ್ 9 ಹಾಗೂ ನಾಯಕ ಸಿಕಂದರ್ ರಜಾ 46 ರನ್ ಪೇರಿಸಿದ್ದು ತಂಡ 152 ರನ್ ಬಾರಿಸಿತ್ತು. ಭಾರತ ಪರ ಬೌಲಿಂಗ್ ನಲ್ಲಿ ಕಲೀಲ್ ಅಹ್ಮದ್ 2, ತುಷಾರ್ ದೇಶಪಾಂಡೆ, ವಾಷಿಂಗ್ಟನ್ ಸುಂದರ್, ಅಭಿಶೇಕ್ ಶರ್ಮಾ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಪಡೆದಿದ್ದಾರೆ.
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ.
Advertisement