
ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಟಿ20 ಸರಣಿಯ ಮೊದಲೆರೆಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಪೇರಿಸಿತ್ತು. ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಮಳೆಯಿಂದಾಗಿ 8 ಓವರ್ ಗಳಲ್ಲಿ 78 ರನ್ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ 6.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 81 ರನ್ ಪೇರಿಸಿ ಗೆಲುವಿನ ನಗೆ ಬೀರಿತು.
ಭಾರತ ಪಂದ್ಯ ಗೆದ್ದರೂ ಸಂಜು ಸ್ಯಾಮ್ಸನ್ ಮಾತ್ರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಅದಕ್ಕೆ ಕಾರಣ ಗೋಲ್ಡನ್ ಡಕೌಟ್. ಹೌದು, ಹಲವು ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್ ಗೆ ಅವಕಾಶ ಸಿಕ್ಕಿರಲಿಲ್ಲ. ಶ್ರೀಲಂಕಾ ಪ್ರವಾಸದಲ್ಲಿ ಮೊದಲ ಟಿ20 ಪಂದ್ಯದಲ್ಲೂ ಸಂಜು ಬೇಂಚ್ ಕಾದಿದ್ದರು. ಇದು ಅಂದು ಸಂಜು ಪರ ನೆಟ್ಟಿಗರು ಮಾತನಾಡುವಂತಾಗಿತ್ತು. ಹೀಗಾಗಿ ಎರಡನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಲಾಗಿತ್ತು.
ಆರಂಭಿಕರಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ತೀಕ್ಷಣ ಬೌಲಿಂಗ್ ನಲ್ಲಿ ಮೊದಲ ಎರಡಲ್ಲೇ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇದು ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿತ್ತು. ಹೀಗಾಗಿ ಇದೀಗ ನೆಟ್ಟಿಗರು ಸಂಜು ವಿರುದ್ಧ ಆಕ್ರೋಶ ಹೊರಹಾಕಿದ್ದರೆ ಮತ್ತೆ ಕೆಲವರು ಸಂಜು ಸ್ಯಾಮ್ಸನ್ ಪರವಾಗಿ ಕಮೆಂಟ್ ಮಾಡುತ್ತಿದ್ದಾರೆ.
Advertisement