ಶ್ರುತಿ ರಘುನಾಥನ್‌ ರೊಂದಿಗೆ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್ ವಿವಾಹ!​

ಐಪಿಎಲ್ 2024ನೇ ಆವೃತ್ತಿಯಲ್ಲಿ ಪ್ರಶಸ್ತಿ ಗೆದ್ದ ಕೆಲವೇ ದಿನಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ (ಕೆಕೆಆರ್) ತಂಡದ ಸ್ಟಾರ್ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಅವರು ಜೂನ್ 2ರಂದು ಶ್ರುತಿ ರಘುನಾಥನ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬ ಮತ್ತು ಸ್ನೇಹಿತರ ಸಮ್ಮುಖದಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ದಂಪತಿ ಇದೀಗ ವಿವಾಹ ಮಾಡಿಕೊಂಡಿದ್ದಾರೆ.
ಶ್ರುತಿ ರಘುನಾಥನ್‌ರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್!​
ಶ್ರುತಿ ರಘುನಾಥನ್‌ರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್!​
Updated on

ಐಪಿಎಲ್ 2024ನೇ ಆವೃತ್ತಿಯಲ್ಲಿ ಪ್ರಶಸ್ತಿ ಗೆದ್ದ ಕೆಲವೇ ದಿನಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ (ಕೆಕೆಆರ್) ತಂಡದ ಸ್ಟಾರ್ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಅವರು ಜೂನ್ 2ರಂದು ಶ್ರುತಿ ರಘುನಾಥನ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬ ಮತ್ತು ಸ್ನೇಹಿತರ ಸಮ್ಮುಖದಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ದಂಪತಿ ಇದೀಗ ವಿವಾಹ ಮಾಡಿಕೊಂಡಿದ್ದಾರೆ.

ಅಯ್ಯರ್ ಅವರ ವಿವಾಹ ಸಮಾರಂಭದ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನವವಿವಾಹಿತ ದಂಪತಿ ದಕ್ಷಿಣ ಭಾರತದ ಸಾಂಪ್ರದಾಯಿಕ ಮದುವೆ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ದಂಪತಿಗೆ ಹಲವರು ಶುಭಾಶಯ ಕೋರಿದ್ದಾರೆ.

ಶ್ರುತಿ PSG ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್‌ನಿಂದ ಬಿ.ಕಾಂ ಮತ್ತು NIFT ಯಿಂದ ಫ್ಯಾಷನ್ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸದ್ಯ ಅವರು ಬೆಂಗಳೂರಿನ ಲೈಫ್‌ಸ್ಟೈಲ್ ಇಂಟರ್‌ನ್ಯಾಶನಲ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಮರ್ಚಂಡೈಸ್ ಪ್ಲಾನರ್ ಆಗಿ ಕೆಲಸ ಮಾಡುತ್ತಿದ್ದಾರೆ.

ವೆಂಕಟೇಶ್ ಅಯ್ಯರ್ ಅವರು ಇದೀಗ ಡಬಲ್ ಸಂಭ್ರಮದಲ್ಲಿದ್ದು, ಐಪಿಎಲ್ 2024ನೇ ಆವೃತ್ತಿಯಲ್ಲಿ ಕೆಕೆಆರ್ ತಂಡ ಮೂರನೇ ಐಪಿಎಲ್ ಪ್ರಶಸ್ತಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ (ಎಸ್ಆರ್‌ಎಚ್) ವಿರುದ್ಧ ನಡೆದ ಫೈನಲ್‌ನಲ್ಲಿ 29 ವರ್ಷ ವಯಸ್ಸಿನ ಐಯ್ಯರ್ ಕೇವಲ 26 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್‌ ಸಿಡಿಸುವ ಮೂಲಕ ಅದ್ಭುತ 52 ರನ್ ಗಳಿಸಿದರು. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕೆಕೆಆರ್ ಸ್ಮರಣೀಯ ಗೆಲುವಿಗೆ ಕೊಡುಗೆ ನೀಡಿದರು.

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com