
ಗಯಾನಾ: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ T20 ವಿಶ್ವಕಪ್ ಪಂದ್ಯಲ್ಲಿ ಪಪುವಾ ನ್ಯೂ ಗಿನಿಯಾ ವಿರುದ್ಧ ವೆಸ್ಟ್ ಇಂಡೀಸ್ ತಂಡ 5 ವಿಕೆಟ್ ಗಳ ಜಯ ದಾಖಲಿಸಿದೆ.
2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಯುಎಸ್ಎ ಮತ್ತು ಕೆನಡಾ ತಂಡಗಳ ನಡುವಿನ ರೋಚಕ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ತಂಡ ಗೆದ್ದಂತೆ, ಎರಡನೇ ಪಂದ್ಯದಲ್ಲಿ ಸಹ-ಆತಿಥೇಯ ತಂಡ ವೆಸ್ಟ್ ಇಂಡೀಸ್ ಗೆಲುವು ಸಾಧಿಸಿತು.
ಟಿ 20ಯ ಮೊದಲ ಪಂದ್ಯದಲ್ಲಿ ಕೆನಡಾ ವಿರುದ್ಧ ಯುಎಸ್ ದಾಖಲೆಯ ಜಯ ಗಳಿಸಿತ್ತು. ಈಗ 2ನೇ ಪಂದ್ಯದಲ್ಲಿಯೂ ಅತಿಥೇಯ ತಂಡ ಗೆಲುವು ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಪುವಾ ನ್ಯೂ ಗಿನಿಯಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ನ್ಯೂ ಗಿನಿಯಾ ಪರ ಸೆಸೆ ಬೌ ಅರ್ಧ ಶತಕ ದಾಖಲಿಸಿ ತಂಡಕ್ಕೆ ಉತ್ತಮ ರನ್ ಗಳಿಸಲು ನೆರವಾದರು.
137 ರನ್ ಗಳ ಮೊತ್ತವನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡದ ಬ್ಯಾಟ್ಸ್ ಮನ್ ಗಳು ನ್ಯೂ ಗಿನಿಯಾ ಬೌಲರ್ ಗಳನ್ನು ಎದುರಿಸಲು ಹೆಣಗಿದರು. 19 ಓವರ್ ಗಳಲ್ಲಿ ವೆಸ್ಟ್ ಇಂಡೀಸ್ 5 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿ ಗೆಲುವು ದಕ್ಕಿಸಿಕೊಂಡಿತು.
ವೆಸ್ಟ್ ಇಂಡೀಸ್ ನ ಆರಂಭಿಕ ಆಟಗಾರ ಬ್ರಾಂಡನ್ ಕಿಂಗ್ (29 ಎಸೆತಗಳಲ್ಲಿ 34 ರನ್ ಗಳಿಸಿದರೆ) ರೋಸ್ಟನ್ ಚೇಸ್ 27 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 42 ರನ್ ಗಳಿಸಿ ತಂಡದ ಗೆಲುವಿಗೆ ನೆರವಾದರು.
Advertisement