T20 ವಿಶ್ವಕಪ್: ಬಾಂಗ್ಲಾ ವಿರುದ್ಧ 4 ರನ್ ರೋಚಕ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ

ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಸೋಮವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 21ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ದಕ್ಷಿಣ ಆಫ್ರಿಕಾ 4 ರನ್ ಗಳ ರೋಚಕ ಗೆಲುವು ಸಾಧಿಸಿದೆ.
ದಕ್ಷಿಣ ಆಫ್ರಿಕಾ ಆಟಗಾರರು
ದಕ್ಷಿಣ ಆಫ್ರಿಕಾ ಆಟಗಾರರು
Updated on

ನ್ಯೂಯಾರ್ಕ್‌: ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಸೋಮವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 21ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ದಕ್ಷಿಣ ಆಫ್ರಿಕಾ 4 ರನ್ ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಆಡಿದ ಮೂರು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ 6 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ ತಂಡ ಸೂಪರ್ 8 ಹಂತಕ್ಕೆ ಪ್ರವೇಶವನ್ನು ಖಚಿತಪಡಿಸಿಕೊಂಡಿದೆ.

ಇಂದು ನಸ್ಸೌ ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಅರ್ಧಶತಕದ ಜೊತೆಯಾಟದ ನೆರವಿಂದ 6 ವಿಕೆಟ್ ನಷ್ಟಕ್ಕೆ 113 ರನ್ ಗಳ ಸಾಧರಣ ಮೊತ್ತ ಕಲೆ ಹಾಕಿತು.

ಗೆಲುವಿಗೆ 114 ರನ್ ಗುರಿ ಬೆನ್ನತ್ತಿದ ಬಾಂಗ್ಲಾದೇಶ, ತೌಹಿದ್‌ ಹಾಗೂ ಮಹ್ಮದುಲ್ಲಾ ಹೋರಾಟದ ಹೊರತಾಗಿಯೂ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 109 ರನ್‌ ಗಳಿಸಲಷ್ಟೇ ಶಕ್ತವಾಯ್ತು. ಈ ಮೂಲಕ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು 4 ರನ್‌ಗಳಿಂದ ಸೋತಿತು.

ದಕ್ಷಿಣ ಆಫ್ರಿಕಾ ಆಟಗಾರರು
ICC T20 WorldCup 2024: ಅಲ್ಪ ಗುರಿ ನೀಡಿಯೂ ಪಾಕ್ ವಿರುದ್ದ ವಿರೋಚಿತ ಜಯ, ಹಲವು ದಾಖಲೆ ಬರೆದ ಭಾರತ!

ದಕ್ಷಿಣ ಆಫ್ರಿಕಾ ಪರ ಮಾರಕ ಬೌಲಿಂಗ್ ಮಾಡಿದ ಅನ್ರಿಚ್ ನಾರ್ಟ್ಜೆ 4 ಓವರ್‌ಗಳಲ್ಲಿ 17 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಕಗಿಸೊ ರಬಾಡ 4 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರು. ಕೇಶವ್ ಮಹಾರಾಜ್ 4 ಓವರ್‌ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com