
ಬೆಂಗಳೂರು: ಕರ್ನಾಟಕ ಮೂಲದ ಕ್ರಿಕೆಟಿಗ ಮನೀಶ್ ಪಾಂಡೆ ದಾಂಪತ್ಯದಲ್ಲಿ ಬಿರುಕುಂಟಾಗಿದ್ದು, ದಂಪತಿಗಳು ಬೇರೆಯಾಗುತ್ತಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ.
ಹೌದು.. ಟೀಂ ಇಂಡಿಯಾದ ಕರ್ನಾಟಕ ಮೂಲದ ಖ್ಯಾತ ಕ್ರಿಕೆಟಿಗ ಮನೀಷ್ ಪಾಂಡೆ ಮತ್ತು ಅವರ ಪತ್ನಿ ಆಶ್ರಿತಾ ಶೆಟ್ಟಿ ದಾಂಪತ್ಯದಲ್ಲಿ ಏರುಪೇರಾಗಿದ್ದು, ಇಬ್ಬರೂ ಪರಸ್ಪರ ಬೇರೆಯಾಗುತ್ತಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.
ಇದಕ್ಕೆ ಕಾರಣ ಇತ್ತೀಚೆಗೆ ಮನೀಶ್ ಪಾಂಡೆ ಮತ್ತು ಆಶ್ರಿತಾ ಶೆಟ್ಟಿ ತಮ್ಮ ತಮ್ಮ ಇನ್ ಸ್ಟಾಗ್ರಾಂ ಖಾತೆಗಳಲ್ಲಿ ಅಪ್ಲೋಡ್ ಮಾಡಿದ್ದ ಮದುವೆ ಮತ್ತು ಅವರಿಬ್ಬರ ಫೋಟೋಗಳನ್ನು ಇಬ್ಬರೂ ಡಿಲೀಟ್ ಮಾಡಿದ್ದಾರೆ.
ಅವರಿಬ್ಬರ ಫೋಟೋ ಇರಲಿ.. ಮದುವೆ ಫೋಟೋಗಳನ್ನೂ ಕೂಡ ಇಬ್ಬರೂ ಡಿಲೀಟ್ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮನೀಶ್ ಪಾಂಡೆ ಐಪಿಎಲ್ 2024ರ ಟೂರ್ನಿಯಲ್ಲಿ ತಾವು ಪ್ರತಿನಿಧಿಸಿದ್ದ ಕೆಕೆಆರ್ ತಂಡದ ಮತ್ತು ತಾವು ಟ್ರೋಫಿ ಜೊತೆಗಿರುವ ಫೋಟೋಗಳನ್ನು ಅಪ್ಲೋಡ್ ಮಾಡಿದ್ದು, ಅವರ ಫೋಟೋಗಳ ಲಿಸ್ಟ್ ನಲ್ಲಿ ಒಂದೂ ಕೂಡ ಆಶ್ರಿತಾ ಜೊತೆಗಿರುವ ಫೋಟೋ ಇಲ್ಲ. ಇದು ಅಭಿಮಾನಿಗಳ ಶಂಕೆಗೆ ಕಾರಣವಾಗಿದ್ದು ಇಬ್ಬರೂ ಪರಸ್ಪರ ಬೇರೆ ಬೇರೆಯಾಗುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.
Advertisement