3ನೇ ಏಕದಿನ ಪಂದ್ಯದಲ್ಲೂ ಗೆಲುವು: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ ವನಿತೆಯರು!

ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಏಕದಿನ ಕ್ರಿಕೆಟ್ ಪಂದ್ಯದಲ್ಲೂ ಭಾರತ ವನಿತೆಯರ ತಂಡ 6 ವಿಕೆಟ್ ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
India women to clean sweep South Africa in ODI series
ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ
Updated on

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಏಕದಿನ ಕ್ರಿಕೆಟ್ ಪಂದ್ಯದಲ್ಲೂ ಭಾರತ ವನಿತೆಯರ ತಂಡ 6 ವಿಕೆಟ್ ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮಹಿಳಾ ತಂಡ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ 6 ವಿಕೆಟ್​​ಗಳ ಸುಲಭ ಜಯ ದಾಖಲಿಸಿದೆ.

ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿದೆ. ಈ ಪಂದ್ಯಕ್ಕೂ ಮುನ್ನ ನಡೆದಿದ್ದ ಮೊದಲೆರಡು ಪಂದ್ಯಗಳಲ್ಲೂ ಟೀಂ ಇಂಡಿಯಾ, ಆಫ್ರಿಕಾ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮೂರನೇ ಪಂದ್ಯಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಿದೆ.

India women to clean sweep South Africa in ODI series
ICC T20 World Cup 2024: ''ಈಗ ತಾನೇ ಬಂದ.. ಆಡ್ಲಿ ಬಿಡೋ... ಔಟ್ ಮಾಡಬೇಡ''; ಕುಲದೀಪ್ ಗೆ Rohit Sharma ವಾರ್ನಿಂಗ್!

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 50 ಓವರ್‌ಗಳಲ್ಲಿ 215 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಸಾಧಾರಣ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸ್ಮೃತಿ ಮಂಧಾನ ಅವರ 90 ರನ್​ಗಳ ನೆರವಿನಿಂದ ಇನ್ನು 56 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ಸತತ 2 ಪಂದ್ಯಗಳಲ್ಲಿ ಶತಕ ಸಿಡಿಸಿದ್ದ ಸ್ಮೃತಿ ಮಂಧಾನ ಮೂರನೇ ಪಂದ್ಯದಲ್ಲೂ ಶತಕ ಸಿಡಿಸಿ ಹ್ಯಾಟ್ರಿಕ್ ಸಾಧನೆ ಮಾಡುವ ವಿಶ್ವಾಸದಲ್ಲಿದ್ದರು. ಆದರೆ 90ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು.

ನಾಯಕಿ ಹರ್ಮನ್ ಪ್ರೀತ್ ಕೌರ್ ಕೂಡ 48 ಎಸೆತಗಳಲ್ಲಿ 42 ರನ್ ಗಳಿಸಿ ಭಾರತದ ಗೆಲುವನ್ನು ಸುಗಮವಾಗಿಸಿದರು. ಮಧ್ಯಮ ಕ್ರಮಾಂಕದಲ್ಲಿ ಜೆಮಿನಾ ರೋಡ್ರಿಗಸ್ (ಅಜೇಯ 19 ರನ್) ಮತ್ತು ರಿಚಾ ಘೋಷ್ (ಅಜೇಯ 6 ರನ್) ಗೆಲುವಿನ ಔಪಚಾರಕತೆ ಮುಗಿಸಿದರು.

2 ವಿಕೆಟ್ ಪಡೆದ ದೀಪ್ತಿ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ ಸತತ ಶತಕ ಸಿಡಿಸಿದ ಸ್ಮೃತಿ ಮಂಧಾನ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com