
ಗಯಾನ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ತಮ್ಮ ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ(T20 World Cup) ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಗಯಾನದ ಪ್ರೊವಿಡೆನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್(IND vs ENG semifinal) ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿ 5000 ರನ್ ಗಳಿಸಿದ ಸಾಧನೆ ಮಾಡಿದ್ದು, ಈ ಸಾಧನೆ ಮಾಡಿದ ಭಾರತದ 5ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಇದಕ್ಕೂ ಮೊದಲು ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಅಜರುದ್ದೀನ್, ಸೌರವ್ ಗಂಗೂಲಿ ಈ ಸಾಧನೆ ಮಾಡಿದ್ದರು.
5000-plus runs as India captain across formats
12883 - Virat Kohli
11207 - MS Dhoni
8095 - Mohammad Azharuddin
7643 - Sourav Ganguly
5013* - Rohit Sharma
ಬೌಂಡರಿಯಲ್ಲೂ ವಿಶ್ವದಾಖಲೆ
ಇನ್ನು ಇದೇ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್ ಕ್ರಿಕೆಟ್ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ತಮ್ಮ ನಾಲ್ಕನೇ ಬೌಂಡರಿ ಬಾರಿಸುತ್ತಿದ್ದಂತೆಯೇ ಈ ಸಾಧನೆ ಮಾಡಿದರು. ಈ ಮೂಲಕ ಶ್ರೀಲಂಕಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಲ ಜಯವರ್ಧನೆ(Mahela Jayawardene) ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.
ಇಲ್ಲಿನ ಪ್ರೊವಿಡೆನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್(IND vs ENG semifinal) ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ರೋಹಿತ್ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್ ಕ್ರಿಕೆಟ್ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು.
ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು. ಜಯವರ್ಧನೆ 111 ಬೌಂಡರಿ ಬಾರಿಸಿದ್ದರು. ಈ ದಾಖಲೆಯನ್ನು ರೋಹಿತ್ ಹಿಂದಿಕ್ಕಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ರೋಹಿತ್ ಅವರ ಬೌಂಡರಿಗಳ ಸಂಖ್ಯೆ 91 ಇತ್ತು.
Advertisement