
ಬ್ರಿಡ್ಜ್‌ಟೌನ್: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದ್ದು ರೋಹಿತ್ ಶರ್ಮಾ ಮತ್ತು ರಿಷಬ್ ಪಂತ್, ಸೂರ್ಯ ಕುಮಾರ್ ವಿಕೆಟ್ ಕಳೆದುಕೊಂಡಿದ್ದಾರೆ.
ಮೊದಲ ಓವರ್ ನಲ್ಲಿ 15 ರನ್ ಗಳ ಭರ್ಜರಿ ಆರಂಭ ಪಡೆದರೂ ಎರಡನೇ ಓವರ್ ನಲ್ಲಿ ಕೇಶವ್ ಮಹಾರಾಜ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು ಒಂದೇ ಓವರ್ ನಲ್ಲಿ 9 ರನ್ ಗಳಿಸಿದ್ದ ರೋಹಿತ್ ಶರ್ಮಾ ಮತ್ತು ರಿಷಬ್ ಪಂತ್ ರನ್ನು ಶೂನ್ಯಕ್ಕೆ ಔಟ್ ಮಾಡಿದರು. ನಂತರ 2 ರನ್ ಗಳಿಸಿದ್ದ ಸೂರ್ಯಕುಮಾರ್ ರಬಾಡ ಓವರ್ ನಲ್ಲಿ ಔಟ್ ಆದರು. ಸದ್ಯ ಐದು ಓವರ್ ಮುಕ್ತಾಯಕ್ಕೆ ಭಾರತ 3 ವಿಕೆಟ್ ನಷ್ಟಕ್ಕೆ 39 ರನ್ ಪೇರಿಸಿದೆ.
ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ ಅಜೇಯ 21 ರನ್ ಪೇರಿಸಿದ್ದರೆ ಅಕ್ಷರ್ ಪಟೇಲ್ 8 ರನ್ ಬಾರಿಸಿ ಆಡುತ್ತಿದ್ದಾರೆ.
Advertisement