
2024ರ ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾರತ ತಂಡ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ. ಫೈನಲ್‌ನಲ್ಲಿ ಭಾರತ (Team India) ದಕ್ಷಿಣ ಆಫ್ರಿಕಾ (South Africa) ವಿರುದ್ಧ 7 ರನ್‌ಗಳಿಂದ ಜಯ ಸಾಧಿಸಿತ್ತು. ಈ ಗೆಲುವಿನ ನಂತರ ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ತಂಡಕ್ಕೆ ದೊಡ್ಡ ಘೋಷಣೆ ಮಾಡಿದೆ. ಇದೀಗ ಭಾರತ ತಂಡಕ್ಕೆ 125 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಜೈ ಶಾ ಪ್ರಕಟಿಸಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಟಿ20 ವಿಶ್ವಕಪ್ 2024 ಪ್ರಶಸ್ತಿಯನ್ನು ಗೆದ್ದ ಭಾರತ ತಂಡವನ್ನು ಅಭಿನಂದಿಸಿದ್ದಾರೆ. ಭಾರತ ತಂಡಕ್ಕೆ 125 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದಾರೆ.
ಪಂದ್ಯಾವಳಿಯುದ್ದಕ್ಕೂ ತಂಡವು ಅಸಾಧಾರಣ ಪ್ರತಿಭೆ, ಸಂಕಲ್ಪ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ ಎಂದು ಅವರು ಹೇಳಿದರು. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದು ಪೋಸ್ಟ್ ಮಾಡಿದ್ದಾರೆ.
ಭಾರತ ತಂಡ ನಾಲ್ಕನೇ ಐಸಿಸಿ ವಿಶ್ವಕಪ್ ಗೆದ್ದಿದೆ
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ಈ ತಂಡವು ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ವಿಶ್ವಕಪ್ (ODI, T20) ಪ್ರಶಸ್ತಿಯನ್ನು ಗೆದ್ದಿದೆ. ಶನಿವಾರ (ಜೂನ್ 29) ನಡೆದ ಟಿ20 ವಿಶ್ವಕಪ್ 2024 ರ ಅಂತಿಮ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ 140 ಕೋಟಿ ಭಾರತೀಯರಿಗೆ ಸಂಭ್ರಮಿಸಲು ಸುವರ್ಣಾವಕಾಶ ಸಿಕ್ಕಂತಾಗಿದೆ.
ಭಾರತ ತಂಡವು ಎರಡು ಬಾರಿ (1983, 2011) ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದಿತ್ತು. ಇನ್ನು (2007, 2024) T20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದಿದೆ. ತಂಡವು ಕೊನೆಯ ಬಾರಿಗೆ 2011 ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದು ಈಗ 13 ವರ್ಷಗಳ ನಂತರ ಭಾರತ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದಿದೆ.
ಈ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ ತಂಡದಲ್ಲಿದ್ದರು.
Advertisement