ICC T20 World Cup 2024: ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಪ್ರಶಸ್ತಿ ದಾಖಲೆ; Virat Kohli ಇರುವ ಎಲೈಟ್ ಗ್ರೂಪ್ ಗೆ Jasprit Bumrah ಸೇರ್ಪಡೆ!

ಈ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ವಿರಾಟ್ ಕೊಹ್ಲಿ ಮತ್ತು ಸರಣಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಜಸ್ ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Virat Kohli-Jasprit Bumrah
ವಿರಾಟ್ ಕೊಹ್ಲಿ ಮತ್ತು ಜಸ್ ಪ್ರೀತ್ ಬುಮ್ರಾ

ಬಾರ್ಬಡೋಸ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ವಿಶ್ವಕಪ್ ಜಯಿಸಿದ ಭಾರತ ತಂಡ ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಪ್ರಶಸ್ತಿಗಳಿಕೆಯಲ್ಲೂ ವಿಶ್ವದಾಖಲೆ ನಿರ್ಮಿಸಿದ್ದು, ವಿರಾಟ್ ಕೊಹ್ಲಿ ಇರುವ ಎಲೈಟ್ ಗ್ರೂಪ್ ಗೆ ಜಸ್ ಪ್ರೀತ್ ಬುಮ್ರಾ ಸೇರ್ಪಡೆಯಾಗಿದ್ದಾರೆ.

ಹೌದು.. ಬಾರ್ಬಡೋಸ್ ಮೈದಾನದಲ್ಲಿ ನಿನ್ನೆ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ 7 ರನ್ ಗಳ ವಿರೋಚಿತ ಜಯ ದಾಖಲಿಸಿದ್ದು, ಈ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ವಿರಾಟ್ ಕೊಹ್ಲಿ ಮತ್ತು ಸರಣಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಜಸ್ ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಆ ಮೂಲಕ ಈ ಜೋಡಿ ಎಲೈಟ್ ಗ್ರೂಪ್ ಸೇರ್ಪಡೆಯಾಗಿದೆ.

ಸರಣಿ ಶ್ರೇಷ್ಠ ಎಲೈಟ್ ಗ್ರೂಪ್ ಗೆ ಬುಮ್ರಾ ಸೇರ್ಪಡೆ

ಇನ್ನು ಟೂರ್ನಿಯಲ್ಲಿ ತಮ್ಮ ಅದ್ಬುತ ಬೌಲಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದ ಜಸ್ ಪ್ರೀತ್ ಬುಮ್ರಾ 15 ವಿಕೆಟ್ ಗಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಈ ಹಿರಿಮೆಗೆ ಪಾತ್ರರಾದ 2ನೇ ಭಾರತೀಯ ಆಟಗಾರ ಮತ್ತು ಜಾಗತಿಕ 8ನೇ ಆಟಗಾರ ಎಂಬ ಕೀರ್ತಿಗೆ ಭಾಜನರಾದರು.

ಈ ಹಿಂದೆ ಭಾರತದ ವಿರಾಟ್ ಕೊಹ್ಲಿ 2 ಬಾರಿ ಈ ಸಾಧನೆದೆ ಪಾತ್ರರಾಗಿದ್ದಾರೆ. 2014 ಮತ್ತು 2016ರ ಟೂರ್ನಿಯಲ್ಲಿ ಕೊಹ್ಲಿ ಸತತ 2 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

Player of the tournament in T20 World Cups

 • Shahid Afridi (PAK)

 • Tillakaratne Dilshan (SL)

 • Kevin Pietersen (ENG)

 • Shane Watson (AUS)

 • Virat Kohli (2) (IND)

 • David Warner (AUS)

 • Sam Curran (ENG)

 • Jasprit Bumrah (IND)

ಗರಿಷ್ಠ ಪಂದ್ಯ ಶ್ರೇಷ್ಠ ಪ್ರಶಸ್ತಿ: ಕೊಹ್ಲಿಗೆ ಅಗ್ರಸ್ಥಾನ

ಇನ್ನು ಈ ಪಂದ್ಯದಲ್ಲಿ ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಭಾರತ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಟಿ20ಯಲ್ಲಿ ಗರಿಷ್ಠ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾದರು.

ನಿನ್ನೆಯ ಪಂದ್ಯವೂ ಸೇರಿದಂತೆ ಕೊಹ್ಲಿ ಈ ವರೆಗೂ 16 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು, 2ನೇ ಸ್ಥಾನದಲ್ಲಿರುವ ಸೂರ್ಯ ಕುಮಾರ್ ಯಾದವ್ 15 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಭಾರತದ ಮತ್ತೊರ್ವ ಆಟಗಾರ ನಾಯಕ ರೋಹಿತ್ ಶರ್ಮಾ 14 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

Most POTM awards in T20Is

 • 16 - Virat Kohli (125 mats)*

 • 15 - Suryakumar Yadav (68)

 • 14 - Rohit Sharma (159)

 • 14 - Sikandar Raza (86)

 • 14 - Mohd Nabi (129)

 • 14 - Virandeep Singh (78)

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com