WPL 2024: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ವ್ಯಕ್ತಿಯ ಬಂಧನ

ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯದ ಸಂದರ್ಭದಲ್ಲಿ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿದ ವ್ಯಕ್ತಿಯೊಬ್ಬನನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಮೈದಾನದಲ್ಲಿ ಓಡುತ್ತಿದ್ದ ಮಧುನನ್ನು ತಡೆದ  ಯುಪಿ ವಾರಿಯರ್ಸ್ ನಾಯಕಿ ಅಲಿಸ್ಸಾ ಹೀಲಿ.
ಮೈದಾನದಲ್ಲಿ ಓಡುತ್ತಿದ್ದ ಮಧುನನ್ನು ತಡೆದ ಯುಪಿ ವಾರಿಯರ್ಸ್ ನಾಯಕಿ ಅಲಿಸ್ಸಾ ಹೀಲಿ.

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯದ ಸಂದರ್ಭದಲ್ಲಿ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿದ ವ್ಯಕ್ತಿಯೊಬ್ಬನನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಮಧು (21) ಎಂದು ಗುರ್ತಿಸಲಾಗಿದೆ. ಈತ ಸೆಂಚುರಿ ಕ್ಲಬ್‌ನಲ್ಲಿ ತೋಟಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬುಧವಾರ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ನಡುವಿನ ಪಂದ್ಯದ ವೇಳೆ ಮೈದಾನಕ್ಕೆ ನುಸುಳಿದ ಮಧುನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೈದಾನದಲ್ಲಿ ಓಡುತ್ತಿದ್ದ ಮಧುನನ್ನು ತಡೆದ  ಯುಪಿ ವಾರಿಯರ್ಸ್ ನಾಯಕಿ ಅಲಿಸ್ಸಾ ಹೀಲಿ.
WPL 2024: ಆರ್‌ಸಿಬಿ ಆಟಗಾರ್ತಿಗೆ ಮೈದಾನದಲ್ಲೇ ಮದುವೆ ಪ್ರಸ್ತಾಪವನ್ನಿಟ್ಟ ಅಭಿಮಾನಿ, ಫೋಟೊ ವೈರಲ್

ಮುಂಬೈ ಇನ್ನಿಂಗ್ಸ್ ವೇಳೆ ವೀಕ್ಷಕರ ಗ್ಯಾಲರಿಯಲ್ಲಿದ್ದ ಮಧು ಏಕಾಏಕಿ ಮೈದಾನದೊಳಗೆ ನುಗ್ಗಿದ್ದಾನೆ. ಯುಪಿ ವಾರಿಯರ್ಸ್ ನಾಯಕಿ ಅಲೀಸಾ ಹೀಲಿ ಆತನನ್ನು ತಳ್ಳುವ ಮೂಲಕ ಭದ್ರತಾ ಸಿಬ್ಬಂದಿಯ ಕೆಲಸವನ್ನು ಸುಲಭಗೊಳಿಸಿದ್ದರು. ಬಳಿಕ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. ಘಟನೆ ಬಳಿಕ ಕೆಲ ಕಾಲ ಆಟಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿತ್ತು.

ಆರೋಪಿ ಮಧು ವಿರುದ್ಧ ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣ) ಹಾಗೂ 290 (ಸಾರ್ವಜನಿಕ ತೊಂದರೆ) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com