2024 ಐಪಿಎಲ್ ಆವೃತ್ತಿ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಆರ್‌ಸಿಬಿ ಸ್ಟಾರ್ ಆಟಗಾರ ವಿದಾಯ!

ಭಾರತದ ವಿಕೆಟ್‌ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಮಾರ್ಚ್ 22 ರಿಂದ ಪ್ರಾರಂಭವಾಗುವ 2024ರ ಐಪಿಎಲ್ ಆವೃತ್ತಿಯಲ್ಲಿ ತಮ್ಮ ಕೊನೆಯ ಪ್ರದರ್ಶನ ನೀಡಲು ಸಿದ್ಧರಾಗಿದ್ದಾರೆ. ಈ ಟಿ20 ಲೀಗ್‌ನ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೂ ವಿದಾಯ ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು
ರಾಯಲ್ ಚಾಲೆಂಜರ್ಸ್ ಬೆಂಗಳೂರು
Updated on

ಧರ್ಮಶಾಲಾ: ಭಾರತದ ವಿಕೆಟ್‌ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಮಾರ್ಚ್ 22 ರಿಂದ ಪ್ರಾರಂಭವಾಗುವ 2024ರ ಐಪಿಎಲ್ ಆವೃತ್ತಿಯಲ್ಲಿ ತಮ್ಮ ಕೊನೆಯ ಪ್ರದರ್ಶನ ನೀಡಲು ಸಿದ್ಧರಾಗಿದ್ದಾರೆ. ಈ ಟಿ20 ಲೀಗ್‌ನ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೂ ವಿದಾಯ ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಜೊತೆ ಒಪ್ಪಂದ ಮಾಡಿಕೊಂಡಿರುವ 38 ವರ್ಷದ ದಿನೇಶ್ ಕಾರ್ತಿಕ್ ಅವರು 2008 ರಿಂದ ಐಪಿಎಲ್‌ನ ಎಲ್ಲಾ 16 ಆವೃತ್ತಿಗಳಲ್ಲಿ ಆಡಿದ್ದಾರೆ.

'ಈ 2024ರ ಆವೃತ್ತಿಯು ದಿನೇಶ್ ಕಾರ್ತಿಕ್ ಅವರ ಕೊನೆಯ ಐಪಿಎಲ್ ಆಗಿರುತ್ತದೆ. ಐಪಿಎಲ್ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೂ ನಿವೃತ್ತಿ ಘೋಷಿಸುವ ಬಗ್ಗೆ ನಿರ್ಧರಿಸಲಿದ್ದಾರೆ' ಎಂದು ಹೆಸರು ಹೇಳಲಿಚ್ಛಿಸದ ಬಿಸಿಸಿಐ ಮೂಲವೊಂದು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದೆ.

ಐಪಿಎಲ್‌ನಲ್ಲಿ ಅತ್ಯಂತ ಅನುಭವಿ ವಿಕೆಟ್ ಕೀಪರ್ ಬ್ಯಾಟರ್‌ಗಳಲ್ಲಿ ಒಬ್ಬರಾದ ಕಾರ್ತಿಕ್ ಅವರು ಲೀಗ್‌ನಲ್ಲಿ ಆರು ತಂಡಗಳನ್ನು ಪ್ರತಿನಿಧಿಸಿದ್ದಾರೆ. 2008 ರಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ (ಈಗ ಕ್ಯಾಪಿಟಲ್ಸ್) ತಂಡಕ್ಕೆ ಸೇರ್ಪಡೆಯಾದ ಅವರು 2011 ರಲ್ಲಿ ಕಿಂಗ್ಸ್ XI ಪಂಜಾಬ್‌ ತಂಡಕ್ಕೆ ಸೇರಿದರು. 2012 ಮತ್ತು 2013ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು
IPL 2024: ಹೀಗಿರಲಿದೆ ಆರ್‌ಸಿಬಿ ತಂಡದ ಬಲಿಷ್ಠ ಪ್ಲೇಯಿಂಗ್ XI

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಾಂಚೈಸಿ ಅವರನ್ನು 2015 ರಲ್ಲಿ 10.5 ಕೋಟಿ ರೂ.ಗೆ ಖರೀದಿಸಿತ್ತು. ನಂತರ ಅವರು 2016 ಮತ್ತು 2017ರಲ್ಲಿ ಗುಜರಾತ್ ಲಯನ್ಸ್ ತಂಡಕ್ಕೆ ಆಡಿದ್ದರು. ನಂತರ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡದೊಂದಿಗೆ ನಾಲ್ಕು ಆವೃತ್ತಿಗಳಲ್ಲಿ ಆಡಿದ್ದರು. 2018 ರಲ್ಲಿ ಕೋಲ್ಕತ್ತಾ ತಂಡವನ್ನು ಐಪಿಎಲ್ ಪ್ಲೇಆಫ್‌ಗೆ ಮುನ್ನಡೆಸಿದ್ದರು ಮತ್ತು ಅವರು 2019 ರಲ್ಲಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದಿದ್ದರು.

2022 ರ ಐಪಿಎಲ್ ಆವೃತ್ತಿಗೂ ಮುನ್ನವೇ ದಿನೇಶ್ ಕಾರ್ತಿಕ್ ಅವರನ್ನು ಕೆಕೆಆರ್ ಬಿಡುಗಡೆ ಮಾಡಿತು. ಬಳಿಕ ಆರ್‌ಸಿಬಿ ಎರಡನೇ ಬಾರಿಗೆ 5.5 ಕೋಟಿ ರೂ.ಗೆ ಖರೀದಿಸಿತು. 2022ರಲ್ಲಿ ಅವರು ಆರ್‌ಸಿಬಿಯ ಫಿನಿಶರ್ ಪಾತ್ರವನ್ನು ನಿರ್ವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com