Ind vs Eng 5th Test: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಕನ್ನಡಿಗ ದೇವದತ್ ಪಡಿಕ್ಕಲ್‌ಗೆ ತಂಡದಲ್ಲಿ ಸ್ಥಾನ

ಗುರುವಾರ ಇಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತದ ಅನುಭವಿ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಇಲ್ಲಿ ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ - ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (ಫೋಟೊ-ಎಎಫ್‌ಪಿ)
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ - ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (ಫೋಟೊ-ಎಎಫ್‌ಪಿ)

ಧರ್ಮಶಾಲಾ: ಗುರುವಾರ ಇಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಭಾರತದ ಅನುಭವಿ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಇಲ್ಲಿ ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಆಡಲಿದ್ದು, ಇಂಗ್ಲೆಂಡ್ ಬ್ಯಾಟರ್ ಜಾನಿ ಬೈರ್‌ಸ್ಟೋವ್ ಅವರಿಗೆ ಕೂಡ ಇದು 100ನೇ ಟೆಸ್ಟ್ ಪಂದ್ಯವಾಗಿದ್ದು, ಮಹತ್ವ ಪಡೆದುಕೊಂಡಿದೆ.

2023-24ರ ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕರ್ನಾಟಕದ ಬ್ಯಾಟರ್ ದೇವದತ್ ಪಡಿಕ್ಕಲ್ ಅವರಿಗೆ ಇದೀಗ ಟೀಂ ಇಂಡಿಯಾದಲ್ಲಿ ಸ್ಥಾನ ದೊರಕಿದ್ದು, ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ. ಗಾಯಗೊಂಡಿರುವ ರಜತ್ ಪಾಟಿದಾರ್ ಬದಲಿಗೆ ಪಡಿಕ್ಕಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಬುಧವಾರ ಇಲ್ಲಿ ನಡೆದ ಅಭ್ಯಾಸ ಪಂದ್ಯದ ವೇಳೆ ರಜತ್ ಪಾಟಿದಾರ್ ಅವರ ಎಡ ಪಾದಕ್ಕೆ ಪೆಟ್ಟು ಬಿದ್ದಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಗಾಯಗೊಂಡಿರುವುದರಿಂದ ಅವರು ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್‌ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್‌ ವೇಳೆ ವಿಶ್ರಾಂತಿಗೆ ಮರಳಿದ್ದ ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ಇದೀಗ ತಂಡಕ್ಕೆ ಮರಳಿದ್ದಾರೆ. ಈ ಮೂಲಕ ಆಕಾಶ್ ದೀಪ್ ತಂಡದಿಂದ ಹೊರಗುಳಿದಿದ್ದಾರೆ.

ಐದು ಪಂದ್ಯಗಳ ಸರಣಿಯಲ್ಲಿ ಭಾರತವು 3-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

5ನೇ ಟೆಸ್ಟ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್ ಅಶ್ವಿನ್, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಬೆನ್ ಸ್ಟೋಕ್ಸ್ (ನಾಯಕ), ಜಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್, ಶೋಯೆಬ್ ಬಶೀರ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com