ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000 ರನ್ ಪೂರೈಸಿದ ಶುಭಮನ್ ಗಿಲ್!

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ 110 ರನ್ ಗಳಿಸಿದರು. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000 ರನ್ ಗಳಿಸಿದ ಸಾಧನೆ ಮಾಡಿದರು.
ಶುಭಮನ್ ಗಿಲ್
ಶುಭಮನ್ ಗಿಲ್

ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ 110 ರನ್ ಗಳಿಸಿದರು. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4000 ರನ್ ಗಳಿಸಿದ ಸಾಧನೆ ಮಾಡಿದರು.

ಗಿಲ್ 2019ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. 44 ಏಕದಿನ ಪಂದ್ಯಗಳನ್ನು ಆಡಿರುವ ಅವರು, 103.46 ಸ್ಟ್ರೈಕ್ ರೇಟ್‌ನಲ್ಲಿ 2,271 ರನ್ ಗಳಿಸಿದ್ದಾರೆ.

2020ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದರು. ಇದುವರೆಗೂ 25 ಪಂದ್ಯಗಳಲ್ಲಿ 1,492 ರನ್ ಗಳಿಸಿದ್ದಾರೆ. 2023ರಲ್ಲಿ ಶ್ರೀಲಂಕಾ ವಿರುದ್ಧ ಮೊದಲ ಅಂತರರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ ಅವರು ಈವರೆಗೂ 14 ಟಿ20 ಪಂದ್ಯಗಳಲ್ಲಿ 147.58 ಸ್ಟ್ರೈಕ್ ರೇಟ್‌ನಲ್ಲಿ 335 ರನ್ ಗಳಿಸಿದ್ದಾರೆ.

ಶುಭಮನ್ ಗಿಲ್
ಶುಭಮನ್ ಗಿಲ್

ಮೂರು ಮಾದರಿಯಲ್ಲಿ ಅವರು ಒಟ್ಟು 4,098 ರನ್ ಗಳಿಸಿದ್ದಾರೆ. ಸದ್ಯ ಉತ್ತಮ ಪ್ರದರ್ಶನ ನೀಡುತ್ತಿರುವ ಅವರು ಭಾರತದ ಭರವಸೆಯ ಯುವ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ. ಮೊದಲ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡವನ್ನು 218 ರನ್‌ಗಳಿಗೆ ಆಲೌಟ್ ಮಾಡಿದ ಬಳಿಕ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದೆ.

ಶುಭಮನ್ ಗಿಲ್
IND vs ENG: ರೋಹಿತ್-ಶುಭ್‌ಮನ್ ಗಿಲ್ ಭರ್ಜರಿ ಶತಕ: 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ!

ಎರಡನೇ ದಿನದಾಟದ ಟೀ ವಿರಾಮದ ವೇಳೆ ಭಾರತ ಮೂರು ಪ್ರಮುಖ ವಿಕೆಟ್ ಕಳೆದುಕೊಂಡು 376 ರನ್ ಗಳಿಸಿತ್ತು. ಈ ಮೂಲಕ 158 ರನ್‌ಗಳ ಮುನ್ನಡೆ ಪಡೆದುಕೊಂಡಿತ್ತು. ನಾಯಕ ರೋಹಿತ್ ಶರ್ಮಾ 103 ರನ್ ಗಳಿಸಿದರೆ, ಶುಭಮನ್ ಗಿಲ್ 110 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ಕನ್ನಡಿಗ ದೇವದತ್ ಪಡಿಕ್ಕಲ್ ಟೀ ವಿರಾಮದ ವೇಳೆಗೆ ಅಜೇಯ 44 ರನ್ ಗಳಿಸಿದ್ದು, ದೊಡ್ಡ ಮೊತ್ತ ಕಲೆಹಾಕುವ ಭರವಸೆ ಮೂಡಿಸಿದ್ದಾರೆ. ಸರ್ಫರಾಜ್‌ಖಾನ್ ಅರ್ಧಶತಕ ಗಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com