IPL 2024: ಶೀಘ್ರದಲ್ಲೇ RCB ಅಭ್ಯಾಸ ಶಿಬಿರಕ್ಕೆ ಕಿಂಗ್ ಕೊಹ್ಲಿ!

ಮಾರ್ಚ್ 22 ರಂದು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐಪಿಎಲ್ 2024ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಆಡಲು ರಾಯಲ್ ಚಾಲೆಂಜರ್ಸ್ ತಂಡವು ಸಜ್ಜಾಗುತ್ತಿದ್ದು, ಅದಕ್ಕೂ ಮುನ್ನ ಆರ್​ಸಿಬಿ ಪ್ರಮುಖ ಆಟಗಾರರು ತಂಡವನ್ನು ಸೇರಿಕೊಳ್ಳುತ್ತಿದ್ದಾರೆ. ಮಂಗಳವಾರ ಸಂಜೆ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಶಿಬಿರವನ್ನು ಸೇರಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಬೆಂಗಳೂರು: ಮಾರ್ಚ್ 22 ರಂದು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐಪಿಎಲ್ 2024ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಆಡಲು ರಾಯಲ್ ಚಾಲೆಂಜರ್ಸ್ ತಂಡವು ಸಜ್ಜಾಗುತ್ತಿದ್ದು, ಅದಕ್ಕೂ ಮುನ್ನ ಆರ್​ಸಿಬಿ ಪ್ರಮುಖ ಆಟಗಾರರು ತಂಡವನ್ನು ಸೇರಿಕೊಳ್ಳುತ್ತಿದ್ದಾರೆ. ಮಂಗಳವಾರ ಸಂಜೆ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಶಿಬಿರವನ್ನು ಸೇರಿಕೊಂಡಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ಬಳಿಕ ವಿರಾಟ್ ಕೊಹ್ಲಿ ಯಾವುದೇ ಪಂದ್ಯದಲ್ಲಿ ಕಾಣಿಸಿಕೊಂಡಿಲ್ಲ. ಇತ್ತೀಚೆಗಷ್ಟೇ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಅವರು ಹೊರಗುಳಿದಿದ್ದರು. ಮೂಲಗಳ ಪ್ರಕಾರ, ವಿರಾಟ್ ಕೊಹ್ಲಿ ಮಾರ್ಚ್ 19ರಂದು ಅನ್‌ಬಾಕ್ಸ್ ಕಾರ್ಯಕ್ರಮದ ವೇಳೆಗೆ ಆರ್‌ಸಿಬಿ ಪಾಳಯವನ್ನು ಸೇರಿಕೊಳ್ಳಬಹುದು ಎಂದು ಹೇಳಲಾಗಿದೆ.

ಐಪಿಎಲ್ ಆವೃತ್ತಿ ಆರಂಭಕ್ಕೆ ಇನ್ನು 8 ದಿನಗಳ ಸಮಯ ಇದ್ದು, ತಂಡವು ಅಭ್ಯಾಸ ಆರಂಭಿಸಿದೆ. ಹೊಸ ಮುಖ್ಯ ತರಬೇತುದಾರ ಆಂಡಿ ಫ್ಲವರ್ ಮತ್ತು ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಅವರ ಮಾರ್ಗದರ್ಶನದಲ್ಲಿ ಪ್ರಮುಖ ಆಟಗಾರರು ಅಭ್ಯಾಸ ಮಾಡುತ್ತಿದ್ದಾರೆ.

ಸದ್ಯ ಎರಡನೇ ಮಗುವನ್ನು ಸ್ವಾಗತಿಸಿರುವ ಕಿಂಗ್ ಕೊಹ್ಲಿ ಯಾವಾಗ ಆರ್‌ಸಿಬಿ ಸೇರಲಿದ್ದಾರೆ ಎನ್ನುವ ಪ್ರಶ್ನೆ ಇದೀಗ ಎಲ್ಲಾ ಅಭಿಮಾನಿಗಳಲ್ಲಿ ಮನೆ ಮಾಡಿದೆ. ವೆಸ್ಟ್ ಇಂಡೀಸ್ ವೇಗದ ಬೌಲರ್ ಅಲ್ಜಾರಿ ಜೋಸೆಫ್ ಅವರೊಂದಿಗೆ ನಾಯಕ ಫಾಫ್ ಡು ಪ್ಲೆಸಿಸ್ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ ಕೂಡ ಬುಧವಾರ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ.

'ಮುಂದಿನ ಕೆಲವು ದಿನಗಳಲ್ಲಿ ಕೊಹ್ಲಿ ತಂಡವನ್ನು ಸೇರುವ ನಿರೀಕ್ಷೆಯಿದೆ' ಎಂದು ಐಪಿಎಲ್ ತಂಡಗಳಲ್ಲಿನ ಬೆಳವಣಿಗೆಗಳನ್ನು ಗಮನಿಸುತ್ತಿರುವ ಬಿಸಿಸಿಐ ಮೂಲವೊಂದು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದೆ.

ವಿರಾಟ್ ಕೊಹ್ಲಿ
ಆರ್‌ಸಿಬಿ ಹೆಸರು ಬದಲಾವಣೆ: ರಿಷಬ್ ಶೆಟ್ಟಿ ಬಳಿಕ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೇಳಿದ್ದೇನು?

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 19ರಂದು ಆರ್‌ಸಿಬಿಯ ಅನ್‌ಬಾಕ್ಸ್ ಕಾರ್ಯಕ್ರಮ ನಡೆಯಲಿದ್ದು, ಅಂದೇ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ತಂಡಕ್ಕೆ ಫ್ಲವರ್ ತರಬೇತುದಾರರಾಗಿರುವುದು ಅದೃಷ್ಟ. ಅವರು ಅಸಾಧಾರಣ ಕೋಚ್ ಆಗಿದ್ದಾರೆ ಎಂದು ಡು ಪ್ಲೆಸಿಸ್ ಆರ್‌ಸಿಬಿ 'ಬೋಲ್ಡ್ ಡೈರೀಸ್' ನಲ್ಲಿ ಉಲ್ಲೇಖಿಸಿದ್ದಾರೆ.

ಆ್ಯಂಡಿ ಫ್ಲವರ್ ಮಾತನಾಡಿ, ಆರ್‌ಸಿಬಿ ಕಥೆಯಲ್ಲಿ ಹೊಸ ಅಧ್ಯಾಯ ಬರೆಯುವ ಅವಕಾಶವನ್ನು ನಮಗೆ ನೀಡಲಾಗಿದೆ. ಇದು ತುಂಬಾ ಉತ್ಸಾಹಭರಿತ ಸಂಗತಿಯಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com