PCBಗೆ ಮತ್ತೆ ಮುಳುವಾದ BCCI: ಚಾಂಪಿಯನ್ಸ್ ಟ್ರೋಫಿ ಪಾಕ್ ನಲ್ಲಿ ಆಡಲು ಭಾರತ ಇಚ್ಛಿಸದಿದ್ದರೆ ಪರ್ಯಾಯ ವ್ಯವಸ್ಥೆ!

2025ರ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದಂತೆ ಐಸಿಸಿ ದುಬೈನಲ್ಲಿ ಸಭೆಗಳನ್ನು ನಡೆಸುತ್ತಿದೆ. ಪಾಕಿಸ್ತಾನ 2025ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸುತ್ತದೆ. ಹೀಗಿರುವಾಗ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುತ್ತದೆಯೇ ಬಹುದೊಡ್ಡ ಪ್ರಶ್ನೆಯಾಗಿಯೇ ಉಳಿದಿದೆ. ಈ ಮಧ್ಯೆ ಐಸಿಸಿ ನೀಡಿರುವ ಹೇಳಿಕೆ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದೆ.
ರೋಹಿತ್ ಶರ್ಮಾ-ಬಾಬರ್ ಅಜಂ
ರೋಹಿತ್ ಶರ್ಮಾ-ಬಾಬರ್ ಅಜಂ
Updated on

ನವದೆಹಲಿ: 2025ರ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದಂತೆ ಐಸಿಸಿ ದುಬೈನಲ್ಲಿ ಸಭೆಗಳನ್ನು ನಡೆಸುತ್ತಿದೆ. ಪಾಕಿಸ್ತಾನ 2025ರಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸುತ್ತದೆ. ಹೀಗಿರುವಾಗ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುತ್ತದೆಯೇ ಬಹುದೊಡ್ಡ ಪ್ರಶ್ನೆಯಾಗಿಯೇ ಉಳಿದಿದೆ. ಈ ಮಧ್ಯೆ ಐಸಿಸಿ ನೀಡಿರುವ ಹೇಳಿಕೆ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದೆ.

ಒಂದು ವೇಳೆ ಸರ್ಕಾರದ ನೀತಿಯು ಪಾಕಿಸ್ತಾನಕ್ಕೆ ಭಾರತ ತಂಡವನ್ನು ಕಳುಹಿಸಲು ಅವಕಾಶ ನೀಡದಿದ್ದರೆ, ಭಾರತ ಭಾಗವಹಿಸುವ ಬಗ್ಗೆ ಐಸಿಸಿ ನಿರ್ಧರಿಸಲು ಸಾಧ್ಯವಿಲ್ಲ ಎಂದು ಐಸಿಸಿ ಹೇಳಿದೆ. ಆದಾಗ್ಯೂ, 'ಹೈಬ್ರಿಡ್ ಮಾದರಿ' ಅನುಸರಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಸರ್ಕಾರದ ನೀತಿಯಿಂದಾಗಿ ಐಸಿಸಿ ಭಾರತದ ಭಾಗವಹಿಸುವಿಕೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ರೋಹಿತ್ ಶರ್ಮಾ-ಬಾಬರ್ ಅಜಂ
WPL 2024: ಮುಂಬೈನ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ RCB

ಮುಂದಿನ ವರ್ಷ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜನೆಯಾಗಲಿದೆ. 2023ರಲ್ಲಿ ಭಾರತ ಸರ್ಕಾರವು ತನ್ನ ತಂಡವನ್ನು ಪಾಕಿಸ್ತಾನಕ್ಕೆ ಪ್ರಯಾಣಿಸಲು ಅನುಮತಿಸದಿದ್ದಾಗ, ಏಷ್ಯಾ ಕಪ್ ಅನ್ನು 'ಹೈಬ್ರಿಡ್ ಮಾದರಿಯಲ್ಲಿ' ನಡೆಸಲಾಯಿತು. ಭಾರತವು ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತು. ಭಾರತವು ಪಾಕಿಸ್ತಾನಕ್ಕೆ ಪ್ರವಾಸ ಮಾಡದಿದ್ದರೆ ಐಸಿಸಿ ಹೈಬ್ರಿಡ್ ಮಾದರಿಯನ್ನು ಆಯ್ಕೆ ಮಾಡಬಹುದು.

ಯುಎಇಯಲ್ಲಿ ಕ್ರಿಕೆಟ್ ಆಡಲು ಫೆಬ್ರವರಿ ಮತ್ತು ಮಾರ್ಚ್ ಸೂಕ್ತ ತಿಂಗಳುಗಳು. ಅಲ್ಲದೆ ಇಲ್ಲಿ ಮೂರು ಅಂತರಾಷ್ಟ್ರೀಯ ಸ್ಟೇಡಿಯಂಗಳೂ ಇವೆ. ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ಬಯಸದಿದ್ದರೆ ಭಾರತವು 'ಹೈಬ್ರಿಡ್ ಮಾದರಿ' ಅಡಿಯಲ್ಲಿ ಯುಎಇಯಲ್ಲಿ ತನ್ನ ಪಂದ್ಯಗಳನ್ನು ಆಡಬಹುದು. ಎಂಟು ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸುವ ನಿರೀಕ್ಷೆಯಿದೆ ಮತ್ತು ಭಾರತದ ಗುಂಪು ಪಂದ್ಯಗಳನ್ನು ದುಬೈ, ಅಬುಧಾಬಿ ಮತ್ತು ಶಾರ್ಜಾದಲ್ಲಿ ನಡೆಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com