WPL ಫೈನಲ್: ಚೊಚ್ಚಲ ಪ್ರಶಸ್ತಿ ಪಡೆಯುವ ತವಕದಲ್ಲಿ ಡೆಲ್ಲಿ ಕ್ಯಾಪಿಟಲ್ಸ್- ರಾಯಲ್ ಚಾಲೆಂಜರ್ಸ್ ಬೆಂಗಳೂರು

ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2024ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಅವರು ತಮ್ಮ ಚೊಚ್ಚಲ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ
ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ

ನವದೆಹಲಿ: ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2024ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಅವರು ತಮ್ಮ ಚೊಚ್ಚಲ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.

ಕಳೆದ ಆವೃತ್ತಿಯಂತೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಮ್ಮೆ ಮುಂಬೈ ಇಂಡಿಯನ್ಸ್ ಅನ್ನು ಎದುರಿಸಲಿದೆ ಎಂದೇ ಭಾವಿಸಲಾಗಿತ್ತು. ಆದರೆ, ಶುಕ್ರವಾರ ನಡೆದ ಎಲಿಮಿನೇಟರ್‌ ಪಂದ್ಯದಲ್ಲಿ ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ, ರೋಚಕ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದೆ.

ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸತತ ಎರಡು ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಿರುವ ಆರ್‌ಸಿಬಿ, ಇಂದು ನಡೆಯಲಿರುವ ಡೆಲ್ಲಿ ವಿರುದ್ಧದ ಪೈನಲ್‌ನಲ್ಲೂ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಿಕ್ಕಿರಿದ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಕುತೂಹಲಕಾರಿ ವಿಚಾರವೆಂದರೆ, ಈ ಎರಡೂ ತಂಡಗಳು ಐಪಿಎಲ್‌ನಲ್ಲಿ ಈವರೆಗೂ ಕಪ್ ಗೆದ್ದಿಲ್ಲ. 2024ರ ಡಬ್ಲ್ಯುಪಿಎಲ್ ಟ್ರೋಫಿಯನ್ನು ಯಾರೇ ಗೆದ್ದರೂ, ಈ ಎರಡೂ ಫ್ರಾಂಚೈಸಿಗಳಿಗೆ ಪ್ರಶಸ್ತಿ ಬರ ಕೊನೆಗೊಳ್ಳಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ
WPL 2024: ಮುಂಬೈನ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ RCB

2023 ರಲ್ಲಿ ರನ್ನರ್-ಅಪ್ ಆಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ಈ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನದೊಂದಿಗೆ ಲೀಗ್ ಹಂತದ ನಂತರ ಅಗ್ರಸ್ಥಾನಕ್ಕೇರಿತ್ತು. ಡಬ್ಲ್ಯುಪಿಎಲ್‌ನ ಎರಡು ಆವೃತ್ತಿಗಳಲ್ಲಿ ಆರ್‌ಸಿಬಿ ವಿರುದ್ಧದ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವು ಸಾಧಿಸಿದೆ. ಈ ಬಾರಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಕೇವಲ ಒಂದು ರನ್ ಅಂತರದಿಂದ ಸೋಲು ಕಂಡಿತ್ತು.

ರಾಯಲ್ ಚಾಲೆಂಜರ್ಸ್ ತಂಡದ ಎಲ್ಲಿಸ್ ಪೆರ್ರಿ 312 ರನ್‌ಗಳೊಂದಿಗೆ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಎಲಿಮಿನೇಟರ್‌ನಲ್ಲಿ 66 ರನ್ ಗಳಿಸುವ ಮೂಲಕ ಆರ್‌ಸಿಬಿ ಗೆಲುವಿಗೆ ಸ್ಮರಣೀಯ ಕೊಡುಗೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com