IPL 2024: 17ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ಹಲವು ದಾಖಲೆ ಬರೆಯಲು ವಿರಾಟ್ ಕೊಹ್ಲಿ ಸಜ್ಜು!

ಐಪಿಎಲ್ 2024ರ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮುಖಾಮುಖಿಯಾಗಲಿದ್ದು, ವಿರಾಟ್ ಕೊಹ್ಲಿ ಹಲವು ದಾಖಲೆ ಬರೆಯಲು ಸಜ್ಜಾಗಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಚೆನ್ನೈ: ಐಪಿಎಲ್ 2024ರ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮುಖಾಮುಖಿಯಾಗಲಿದ್ದು, ವಿರಾಟ್ ಕೊಹ್ಲಿ ಹಲವು ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯದಲ್ಲಿ ಕೊಹ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಬಳಿಕ ಅವರು ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು.

ಶುಕ್ರವಾರ ನಡೆಯಲಿರುವ ಸಿಎಸ್‌ಕೆ ವಿರುದ್ಧದ ಪಂದ್ಯದ ವೇಳೆ ಕೊಹ್ಲಿ ಆರು ರನ್ ಗಳಿಸಿದರೆ, ಟಿ20 ಕ್ರಿಕೆಟ್‌ನಲ್ಲಿ 12,000 ರನ್ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸದ್ಯಕ್ಕೆ, 376 ಟಿ20 ಪಂದ್ಯಗಳಲ್ಲಿ ಆಡಿರುವ ಭಾರತದ ಮಾಜಿ ನಾಯಕ 11,994 ರನ್ ಗಳಿಸಿದ್ದಾರೆ.

ವಿರಾಟ್ ಕೊಹ್ಲಿ
ಐಪಿಎಲ್ 2024: ಮಾರ್ಚ್ 22ಕ್ಕೆ ಚೆನ್ನೈನಲ್ಲಿ CSK vs RCB ನಡುವೆ ಉದ್ಘಾಟನಾ ಪಂದ್ಯ!

ಅಲ್ಲದೆ, ಈ ಪಂದ್ಯದಲ್ಲೂ ಅರ್ಧಶತಕ ಗಳಿಸಿದರೆ ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕಗಳನ್ನು ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಆಗಲಿದ್ದಾರೆ ಮತ್ತು ವಿಶ್ವದ ಮೂರನೇ ಆಟಗಾರನಾಗುವ ಅವಕಾಶ ಪಡೆಯಲಿದ್ದಾರೆ. ಕ್ರಿಸ್ ಗೇಲ್ (110) ಮತ್ತು ಡೇವಿಡ್ ವಾರ್ನರ್ (109) ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿದ್ದಾರೆ.

ಇದಲ್ಲದೆ, ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 1000 ರನ್ ಗಳಿಸಿದ ಎರಡನೇ ಬ್ಯಾಟರ್ ಆಗುವ ಅವಕಾಶವನ್ನು ಕೊಹ್ಲಿ ಪಡೆಯಲಿದ್ದಾರೆ. ಸದ್ಯ ಸಿಎಸ್‌ಕೆ ವಿರುದ್ಧದ 31 ಪಂದ್ಯಗಳಲ್ಲಿ 985 ರನ್ ಗಳಿಸಿರುವ ಕೊಹ್ಲಿ, ಈ ಸಾಧನೆ ಮಾಡಲು ಕೇವಲ 15 ರನ್ ಗಳಿಸಬೇಕಾಗಿದೆ.

ವಿರಾಟ್ ಕೊಹ್ಲಿ
ನನ್ನನ್ನು 'ಕಿಂಗ್' ಎಂದು ಕರೆಯಬೇಡಿ, ವಿರಾಟ್ ಎಂದರೆ ಸಾಕು: RCB ಅಭಿಮಾನಿಗಳಿಗೆ ಕೊಹ್ಲಿ ಮನವಿ

35 ವರ್ಷದ ಕೊಹ್ಲಿ, ಐಪಿಎಲ್‌ನಲ್ಲಿ ಸಾರ್ವಕಾಲಿಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. 237 ಪಂದ್ಯಗಳು ಮತ್ತು 229 ಇನಿಂಗ್ಸ್‌ಗಳಲ್ಲಿ 130.02 ಸ್ಟ್ರೈಕ್ ರೇಟ್‌ನೊಂದಿಗೆ 7,263 ರನ್ ಗಳಿಸಿದ್ದಾರೆ. ಸ್ಟಾರ್ ಬ್ಯಾಟರ್ ಆಗಿರುವ ಕೊಹ್ಲಿ, ಅವರ ಐಪಿಎಲ್ ವೃತ್ತಿಜೀವನದಲ್ಲಿ ಏಳು ಶತಕಗಳು ಮತ್ತು 50 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಕಳೆದ ಐಪಿಎಲ್ ಆವೃತ್ತಿಯಲ್ಲಿ, 139.82 ರ ಸ್ಟ್ರೈಕ್ ರೇಟ್‌ನೊಂದಿಗೆ 639 ರನ್‌ಗಳನ್ನು ಗಳಿಸುವ ಮೂಲಕ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು. ಅವರು ಎರಡು ಶತಕ ಮತ್ತು ಆರು ಅರ್ಧಶತಕಗಳನ್ನು ಬಾರಿಸಿದ್ದಾರೆ. ಆದರೆ, ಆರ್‌ಸಿಬಿ ತಂಡವನ್ನು ಪ್ಲೇ ಆಫ್‌ಗೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ವಿರಾಟ್ ಕೊಹ್ಲಿ
IPL 2024: ನಾಳೆಯಿಂದ ಐಪಿಎಲ್ ಹಬ್ಬ ಶುರು; ಯಾವ ಪಂದ್ಯಗಳು ಎಲ್ಲಿ ನಡೆಯಲಿವೆ, ವೇಳಾಪಟ್ಟಿ ಇಲ್ಲಿದೆ...

ಐಪಿಎಲ್‌ನ 17ನೇ ಆವೃತ್ತಿ ಶುಕ್ರವಾರ ಆರಂಭವಾಗಲಿದ್ದು, ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com