IPL 2024: ಚೆನ್ನೈ ವಿರುದ್ಧ ಪಂದ್ಯ ಸೋತ ಬೆನ್ನಲ್ಲೇ ನಿವೃತ್ತಿಯ ಸುಳಿವು ನೀಡಿದ RCB ಆಟಗಾರ

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 38 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಆದರೂ ಈ ಪಂದ್ಯದಲ್ಲಿ RCB ತಂಡ ಸೋತಿತ್ತು.
ದಿನೇಶ್ ಕಾರ್ತಿಕ್
ದಿನೇಶ್ ಕಾರ್ತಿಕ್

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ 38 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಆದರೂ ಈ ಪಂದ್ಯದಲ್ಲಿ RCB ತಂಡ ಸೋತಿತ್ತು.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ವೇಳೆ ಕಾಮೆಂಟರಿ ಮಾಡುವುದರಲ್ಲಿ ನಿರತರಾಗಿದ್ದಾರೆ. ಈ ಅವಧಿಯಲ್ಲಿ ಅಭ್ಯಾಸಕ್ಕೆ ಸಮಯ ಕಂಡುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು ಎಂದು ಅವರು ಒಪ್ಪಿಕೊಂಡರು. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಬ್ಯಾಟ್ಸ್‌ಮನ್ ಕಾರ್ತಿಕ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 26 ಎಸೆತಗಳಲ್ಲಿ ಅಜೇಯ 38 ರನ್ ಗಳಿಸಿದರು. ಈ ಕಾರಣದಿಂದಾಗಿ ಅವರ ತಂಡವು 6 ವಿಕೆಟ್‌ಗೆ 173 ರನ್‌ಗಳ ಗೌರವಾನ್ವಿತ ಸ್ಕೋರ್ ಗಳಿಸುವಲ್ಲಿ ಯಶಸ್ವಿಯಾಗಿತ್ತು.

ದಿನೇಶ್ ಕಾರ್ತಿಕ್
IPL 2024: RCB ವಿರುದ್ಧ ಚೆನ್ನೈ ತಂಡಕ್ಕೆ 6 ವಿಕೆಟ್ ಜಯ

ಪಂದ್ಯದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ತಿಕ್, “ಕಾಮೆಂಟರಿ ಮಾಡುವಾಗ ಟೆಸ್ಟ್ ಪಂದ್ಯಗಳ ನಡುವೆ ಕ್ರಿಕೆಟ್ ಆಡಲು ಸಮಯವನ್ನು ಹುಡುಕುವುದು ತುಂಬಾ ಸವಾಲಿನ ಸಂಗತಿಯಾಗಿದೆ. ಸಿಕ್ಕ ಸಮಯದಲ್ಲಿ ಕಷ್ಟಪಟ್ಟು ದುಡಿಯುತ್ತಿದ್ದೆ. ಹಾಗಾಗಿ ಮೊದಲ ಪಂದ್ಯದಲ್ಲೇ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾದದ್ದು ಖುಷಿ ತಂದಿದೆ ಎಂದರು.

38ರ ಹರೆಯದ ಆಟಗಾರ ತಮ್ಮ ತಂಡ ಪ್ಲೇಆಫ್‌ಗೆ ತಲುಪಬೇಕು ಮತ್ತು ಚೆಪಾಕ್‌ನಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡುವ ಅವಕಾಶ ಸಿಗುತ್ತದೆ ಎಂದು ಆಶಿಸಿದ್ದಾರೆ. ಚೆನ್ನೈನಲ್ಲಿ ಇಂದು ತಮ್ಮ ಕೊನೆಯ ಪಂದ್ಯವನ್ನು ಆಡಿದ್ದೀರಾ ಎಂದು ಪ್ರಶ್ನಿಸಿದ್ದಕ್ಕೆ ಅದನ್ನು ಸಮಯ ಮಾತ್ರ ಹೇಳುತ್ತದೆ. ಆದರೆ ನಾನು ಅದನ್ನು ನಿಜವಾಗಿಯೂ ಬಯಸುವುದಿಲ್ಲ. ಏಕೆಂದರೆ ಪ್ಲೇಆಫ್ ಪಂದ್ಯಗಳನ್ನು ಇಲ್ಲಿ ಆಡಲಾಗುತ್ತದೆ. ನಾನು ಮತ್ತೊಮ್ಮೆ ಚೆಪಕ್ ಕ್ರೀಡಾಂಗಣದಲ್ಲಿ ಆಡಬೇಕಾದರೆ ನಮ್ಮ ತಂಡ ಪ್ಲೇ ಆಫ್ ಗೆ ಬರಲಿ ಎಂದು ಆಶಿಸುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com