IPL 2024: KKR vs SRH ಪಂದ್ಯದ ವೇಳೆ ಸಿಗರೇಟ್ ನಟ ಶಾರುಖ್ ಖಾನ್ ಧೂಮಪಾನ?

ಶನಿವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ಪಂದ್ಯದ ವೇಳೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರುಖ್ ಖಾನ್ ಅವರು ಈಡನ್ ಗಾರ್ಡನ್ಸ್ ಮೈದಾನದಲ್ಲಿ ಧೂಮಪಾನ ಮಾಡಿದ್ದಾರೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.
ನಟ ಶಾರುಖ್ ಖಾನ್
ನಟ ಶಾರುಖ್ ಖಾನ್
Updated on

ಶನಿವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ಪಂದ್ಯದ ವೇಳೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರುಖ್ ಖಾನ್ ಅವರು ಈಡನ್ ಗಾರ್ಡನ್ಸ್ ಮೈದಾನದಲ್ಲಿ ಧೂಮಪಾನ ಮಾಡಿದ್ದಾರೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಸ್ಟೇಡಿಯಂನಲ್ಲಿನ ವಿಐಪಿ ಬಾಕ್ಸ್‌ನೊಳಗೆ ಶಾರುಖ್ ಖಾನ್ ಅವರು ಧೂಮಪಾನ ಮಾಡುತ್ತಿದ್ದಾನೆ ಎಂದು ಸೂಚಿಸುವ ಚಿತ್ರಗಳು ಮತ್ತು ವಿಡಿಯೋಗಳು ವೈರಲ್ ಆಗಿವೆ. ಆದರೆ, ಇದರ ಸತ್ಯಾಸತ್ಯತೆ ಏನೆಂಬುದು ತಿಳಿದುಬಂದಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಂದ್ಯದ ವೇಳೆ ಅವರ ವರ್ತನೆಗೆ ಹಲವು ಬಳಕೆದಾರರು ಟೀಕಿಸಿದ್ದಾರೆ.

ಈ ಹಿಂದೆ ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್‌ಎಲ್) ಫೈನಲ್‌ ಪಂದ್ಯದ ವೇಳೆ ಇಮಾದ್ ವಾಸಿಮ್ ಕೂಡ ಡ್ರೆಸ್ಸಿಂಗ್ ರೂಮ್‌ನಲ್ಲಿ ಸಿಗರೇಟ್ ಸೇದುತ್ತಿದ್ದ ಘಟನೆಯನ್ನು ಇದು ನೆನಪಿಸಿದೆ.

ಆ್ಯಂಡ್ರೆ ರಸೆಲ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಶನಿವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ವಿರುದ್ಧ 4 ರನ್‌ಗಳ ಜಯ ಸಾಧಿಸಿದೆ.

ಹೆನ್ರಿಚ್ ಕ್ಲಾಸೆನ್ ಅವರು 29 ಬಾಲ್‌ನಲ್ಲಿ 63 ರನ್ ಗಳಿಸುವ ಮೂಲಕ ಎಸ್ಆರ್‌ಎಚ್ ತಂಡವನ್ನು ಗೆಲುವಿನ ಸಮೀಪಕ್ಕೆ ಕರೆದೊಯ್ದರೂ, ಅಂತಿಮವಾಗಿ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.

ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತ ನೈಟ್ ರೈಡರ್ಸ್‌ ತಂಡ, ಅನುಭವಿ ಆ್ಯಂಡ್ರೆ ರಸೆಲ್ ಅವರ ಅಬ್ಬರದ ಅರ್ಧಶತಕ (25 ಎಸೆತಗಳಲ್ಲಿ 64 ರನ್ ಗಳಿಸಿ ಅಜೇಯ) ಮತ್ತು ಫಿಲ್ ಸಾಲ್ಟ್ (40 ಎಸೆತಗಳಲ್ಲಿ 54) ಅವರ ಅರ್ಧಶತಕದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 208 ರನ್‌ಗಳ ದೊಡ್ಡ ಮೊತ್ತ ಗಳಿಸಿತ್ತು.

ಇದಕ್ಕೆ ಉತ್ತರವಾಗಿ ಪ್ಯಾಟ್ ಕಮಿನ್ಸ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಲಷ್ಟೇ ಶಕ್ತವಾಯಿತು. ರಸೆಲ್ ಬೌಲಿಂಗ್‌ನಲ್ಲೂ ಎರಡು ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com