IPL 2024: MI vs GT ಪಂದ್ಯದ ವೇಳೆ ಪಿಚ್‌ಗೆ ನುಗ್ಗಿದ ನಾಯಿ, ಅಭಿಮಾನಿಗಳಿಂದ ‘ಹಾರ್ದಿಕ್, ಹಾರ್ದಿಕ್’ ಘೋಷಣೆ

ಭಾನುವಾರ ಸಂಜೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆದ ಪಂದ್ಯದ ವೇಳೆ ಇದ್ದಕ್ಕಿದ್ದಂತೆ ನಾಯಿಯೊಂದು ಮೈದಾನಕ್ಕೆ ಪ್ರವೇಶಿಸಿದಾಗ ಅಭಿಮಾನಿಗಳು ‘ಹಾರ್ದಿಕ್, ಹಾರ್ದಿಕ್’ ಎಂದು ಘೋಷಣೆ ಕೂಗಲಾರಂಭಿಸಿದರು.
ಮೈದಾನದೊಳಗೆ ನುಗ್ಗಿದ್ದ ನಾಯಿಯನ್ನು ಕರೆಯಲು ಯತ್ನಿಸಿದ ಹಾರ್ದಿಕ್ ಪಾಂಡ್ಯ
ಮೈದಾನದೊಳಗೆ ನುಗ್ಗಿದ್ದ ನಾಯಿಯನ್ನು ಕರೆಯಲು ಯತ್ನಿಸಿದ ಹಾರ್ದಿಕ್ ಪಾಂಡ್ಯ

ಅಹಮದಾಬಾದ್: ಭಾನುವಾರ ಸಂಜೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆದ ಪಂದ್ಯದ ವೇಳೆ ಇದ್ದಕ್ಕಿದ್ದಂತೆ ನಾಯಿಯೊಂದು ಮೈದಾನಕ್ಕೆ ಪ್ರವೇಶಿಸಿದಾಗ ಅಭಿಮಾನಿಗಳು ‘ಹಾರ್ದಿಕ್, ಹಾರ್ದಿಕ್’ ಎಂದು ಘೋಷಣೆ ಕೂಗಲಾರಂಭಿಸಿದರು.

ಕಳೆದ ಎರಡು ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ಅವರು ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದರು ಮತ್ತು ಈ ಆವೃತ್ತಿಯಲ್ಲಿ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದು ಗುಜರಾತ್ ಟೈಟಾನ್ಸ್ ತಂಡದ ಅಭಿಮಾನಿಗಳ ಕೋಪಕ್ಕೆ ಕಾಣವಾಗಿದೆ. ಅಲ್ಲದೆ, ರೋಹಿತ್ ಶರ್ಮಾ ಅಭಿಮಾನಿಗಳು ಕೂಡ ಪಾಂಡ್ಯ ವಿರುದ್ಧ ಕೋಪಗೊಂಡಿದ್ದಾರೆ.

ಟಾಸ್‌ ವೇಳೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಬಂದಾಗ ಅಭಿಮಾನಿಗಳು ಜೋರಾಗಿ ಕೂಗುವ ಮೂಲಕ ತಮ್ಮ ಸಿಟ್ಟನ್ನು ಹೊರಹಾಕಿದರು. ಐಪಿಎಲ್ 2024ರ ಹರಾಜಿನ ದಿನ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್‌ಗೆ ಮತ್ತೆ ಸೇರಿಕೊಂಡರು. ಅಲ್ಲದೆ, ಈ ಬಾರಿ ಎಂಐ ತಂಡದ ನಾಯಕರಾಗಿ ಬಡ್ತಿ ಪಡೆದರು.

ಮೈದಾನದಲ್ಲಿ ರೋಚಕ ಪಂದ್ಯ ನಡೆಯುತ್ತಿರುವ ವೇಳೆ ಅನಿರೀಕ್ಷಿತ ಅತಿಥಿಯ ಆಗಮನದಿಂದಾಗಿ ಕೆಲಕಾಲ ಗೊಂದಲ ಉಂಟಾಯಿತು. ಮೊದಲ ಇನಿಂಗ್ಸ್‌ನಲ್ಲಿ ನಾಯಿಯೊಂದು ಪಿಚ್‌ಗೆ ಬಂದಿದ್ದರಿಂದ ಪ್ರೇಕ್ಷಕರಿಗೆ ಒಂದು ಕ್ಷಣ ವಿನೋದವನ್ನು ಉಂಟುಮಾಡಿತು.

ಮೈದಾನದೊಳಗೆ ನುಗ್ಗಿದ್ದ ನಾಯಿಯನ್ನು ಕರೆಯಲು ಯತ್ನಿಸಿದ ಹಾರ್ದಿಕ್ ಪಾಂಡ್ಯ
ಐಪಿಎಲ್ 2024: ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್‌ ಗೆ 6 ರನ್ ಗಳ ಜಯ!

ಎಂಐ ನಾಯಕ ಹಾರ್ದಿಕ್ ಪಾಂಡ್ಯ ಅವರು ತಮ್ಮ ಮೂರನೇ ಓವರ್ ಬೌಲ್ ಮಾಡಲು ಸಜ್ಜಾಗುತ್ತಿದ್ದಂತೆ, ನಾಯಿಯು ಮೈದಾನದೊಳಕ್ಕೆ ನುಗ್ಗಿತು. ಈ ವೇಳೆ ಪಂದ್ಯ ಕೆಲಕಾಲ ಸ್ಥಗಿತಗೊಂಡಿತು. ಆಟಗಾರರು ಮತ್ತು ಅಧಿಕಾರಿಗಳು ನಾಯಿಯನ್ನು ಮೈದಾನದಿಂದ ಹೊರಗೆ ಓಡಿಸಲು ಪ್ರಯತ್ನಿಸಿದರು. ಈ ವೇಳೆ ಪಾಂಡ್ಯ, ನಾಯಿಯನ್ನು ತನ್ನ ಕಡೆಗೆ ಕರೆಯಲು ಪ್ರಯತ್ನಿಸಿದರು. ಆದರೆ, ಅದು ಅವರ ಮಾತನ್ನು ಕೇಳದೆ ಓಡಿಹೋಯಿತು. ಇದು ಪ್ರೇಕ್ಷಕರನ್ನು ರಂಜಿಸಿತು.

ನಾಯಕನಾಗಿ ಗೆದ್ದ ಶುಭಮನ್ ಗಿಲ್

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2024ನೇ ಆವೃತ್ತಿಯಲ್ಲಿ ನಾಯಕನಾಗಿ ಮೊದಲ ಪಂದ್ಯವನ್ನಾಡಿದ ಶುಭಮನ್ ಗಿಲ್ ಗೆದ್ದು ಬೀಗಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ 6 ರನ್‌ಗಳ ರೋಚಕ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿತು. ಈ ಮೊತ್ತವನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸಲಷ್ಟೇ ಶಕ್ತವಾಗಿತು. ಈ ಮೂಲಕ ಗುಜರಾತ್ ಟೈಟಾನ್ಸ್ 6 ರನ್‌ಗಳ ರೋಚಕ ಗೆಲುವು ಸಾಧಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com