GT vs CSK: ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಗೆ 12 ಲಕ್ಷ ರೂ. ದಂಡ!

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ (ಮಾರ್ಚ್ 26) ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್ ಅವರಿಗೆ ಬುಧವಾರ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
GT vs CSK: ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಗೆ 12 ಲಕ್ಷ ರೂ. ದಂಡ!
ಶುಭಮನ್ ಗಿಲ್

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ (ಮಾರ್ಚ್ 26) ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್ ಅವರಿಗೆ ಬುಧವಾರ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

'ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಆವೃತ್ತಿಯ ಮೊದಲ ಅಪರಾಧವಾಗಿದ್ದು, ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕೆ ಸಂಬಂಧಿಸಿದಂತೆ ಗಿಲ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ' ಎಂದು ಐಪಿಎಲ್ ಹೇಳಿಕೆ ತಿಳಿಸಿದೆ.

ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಎದುರು ಗುಜರಾತ್‌ ಟೈಟಾನ್ಸ್‌ ತಂಡವು 63 ರನ್‌ಗಳ ಹೀನಾಯ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್‌ ತಂಡವು ಬೌಲಿಂಗ್‌ ವೇಳೆ ನಿಗದಿತ ಸಮಯದಲ್ಲಿ 20 ಓವರ್‌ಗಳನ್ನು ಮುಗಿಸಲು ವಿಫಲವಾಗಿದ್ದ ಕಾರಣ ಐಪಿಎಲ್‌ ಆಡಳಿತ ಮಂಡಳಿ ಗಿಲ್‌ ಅವರಿಗೆ ದಂಡ ವಿಧಿಸಿದೆ.

GT vs CSK: ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಗೆ 12 ಲಕ್ಷ ರೂ. ದಂಡ!
IPL 2024: ಗುಜರಾತ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 63 ರನ್ ಗಳ ಭರ್ಜರಿ ಜಯ!

ಶುಭಮನ್ ಗಿಲ್ ನೇತೃತ್ವದ ತಂಡವು ಈ ಆವೃತ್ತಿಯ ಟೂರ್ನಿಯಲ್ಲಿ ಮೊದಲನೇ ಸೋಲು ಕಂಡಿತು. ಇದಕ್ಕೂ ಮೊದಲು ಮಾರ್ಚ್ 25ರಂದು ಅಹಮದಾಬಾದಿನಲ್ಲಿ ನಡೆದ ಐಪಿಎಲ್ 2024 ಟೂರ್ನಿಯ 5ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 6 ರನ್‌ಗಳಿಂದ ಮಣಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿತ್ತು.

ಟೂರ್ನಿಯಲ್ಲಿ ಮೊದಲ ಬಾರಿಗೆ ಶುಭಮನ್ ಗಿಲ್‌ ಸ್ಲೋ ಓವರ್‌ ರೇಟ್‌ ಪ್ರಮಾದ ಎಸೆಗಿದ್ದಾರೆ. ಹೀಗಾಗಿ ಪ್ರಾಥಮಿಕ ಶಿಕ್ಷೆಯಾಗಿ ಕೇವಲ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಮತ್ತೆ ತಪ್ಪು ಮರುಕಳಿಸಿದಲ್ಲಿ ನಾಯಕ ಒಂದು ಪಂದ್ಯದ ನಿಷೇಧ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯೂ ಇದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಜಿಟಿ ತಂಡ ತನ್ನ 20 ಓವರ್‌ಗಳನ್ನು ನಿಗದಿತ ಸಮಯದ ಒಳಗೆ ಮುಗಿಸುವ ಒತ್ತಡಕ್ಕೆ ಸಿಲುಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com