IPL 2024: 'ಕರುಣೆಯೇ ಇಲ್ಲ'! ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿಗೆ ಹಿಗ್ಗಾಮುಗ್ಗಾ ಥಳಿಸಿದ ಭದ್ರತಾ ಸಿಬ್ಬಂದಿ, ವಿಡಿಯೋ ವೈರಲ್!

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್​ 25 ರಂದು ನಡೆದ ಐಪಿಎಲ್ ಆವೃತ್ತಿಯ ಪಂದ್ಯದಲ್ಲಿ ಭದ್ರತಾ ನಿಯಮವನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿದ್ದ ಅಭಿಮಾನಿಗೆ ಕ್ರೀಡಾಂಗಣದ ಭದ್ರತಾ ಸಿಬ್ಬಂಧಿಗಳು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೊಹ್ಲಿ ಅಭಿಮಾನಿಗೆ ಥಳಿತ
ಕೊಹ್ಲಿ ಅಭಿಮಾನಿಗೆ ಥಳಿತ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್​ 25 ರಂದು ನಡೆದ ಐಪಿಎಲ್ ಆವೃತ್ತಿಯ ಪಂದ್ಯದಲ್ಲಿ ಭದ್ರತಾ ನಿಯಮವನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿದ್ದ ಅಭಿಮಾನಿಗೆ ಕ್ರೀಡಾಂಗಣದ ಭದ್ರತಾ ಸಿಬ್ಬಂಧಿಗಳು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ ಮತ್ತು ಆರ್​ಸಿಬಿ ನಡುವೆ ಪಂದ್ಯ ನಡೆಯುತ್ತಿತ್ತು. RCB ಬ್ಯಾಟಿಂಗ್ ಮಾಡುವ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿಯೊಬ್ಬ ವಿರಾಟ್ ಕೊಹ್ಲಿ ಪಾದ ಹಿಡಿದುಕೊಂಡಿದ್ದಾನೆ. ನಂತರ ಕೊಹ್ಲಿಯನ್ನು ತಬ್ಬಾಡಿದ್ದನು. ಕೂಡಲೇ ಓಡಿಬಂದ ಮೈದಾನದ ಸೆಕ್ಯೂರಿಟಿ ಗಾರ್ಡ್​ಗಳು ಆತನನ್ನು ಮೈದಾನದಿಂದ ಹೊರಕ್ಕೆ ಎಳೆದೊಯ್ದಿದ್ದರು.

ಈ ವೇಳೆ ಅಭಿಮಾನಿಗೆ ಮೈದಾನದ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್ ಆಗುತ್ತಿದೆ. ಇನ್ನು ಅಭಿಮಾನಿ ವಿರುದ್ಧ ಕಬ್ಬನ್ ಪಾಕ್ ಪೊಲೀಸ್ ಠಾಣೆಯಲ್ಲಿ ದೂರ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com