IPL 2024: ಕೊಹ್ಲಿ ಭರ್ಜರಿ ಬ್ಯಾಟಿಂಗ್, KKR ಗೆಲ್ಲಲು 183 ರನ್ ಗುರಿ ನೀಡಿದ RCB

ರನ್ ಮೆಷಿನ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 183 ರನ್ ಗಳ ಬೃಹತ್ ಗುರಿ ನೀಡಿದೆ.
ಆರ್ ಸಿಬಿ ಬ್ಯಾಟಿಂಗ್
ಆರ್ ಸಿಬಿ ಬ್ಯಾಟಿಂಗ್

ಬೆಂಗಳೂರು: ರನ್ ಮೆಷಿನ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 183 ರನ್ ಗಳ ಬೃಹತ್ ಗುರಿ ನೀಡಿದೆ.

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್ ಸಿಬಿ ತಂಡ, ವಿರಾಟ್ ಕೊಹ್ಲಿ (ಅಜೇಯ 83 ರನ್) ಭರ್ಜರಿ ಅರ್ಧಶತಕ, ಕ್ಯಾಮೆರಾನ್ ಗ್ರೀನ್ (33), ಗ್ಲೇನ್ ಮ್ಯಾಕ್ಸ್ ವೆಲ್ (28 ರನ್) ಮತ್ತು ದಿನೇಶ್ ಕಾರ್ತಿಕ್ (20 ರನ್) ಅಮೋಘ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು.

ಆರ್ ಸಿಬಿ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ 4 ಸಿಕ್ಸರ್, 4 ಬೌಂಡರಿಗಳ ನೆರವಿನಿಂದ ಅಜೇಯ 83ರನ್ ಭಾರಿಸಿದರೆ, ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ದಿನೇಶ್ ಕಾರ್ತಿಕ್ ಕೇವಲ 8 ಎಸೆತಗಳಲ್ಲಿ 3 ಸಿಕ್ಸರ್ ಗಳ ನೆರವಿನಿಂದ 20 ರನ್ ಪೇರಿಸಿ ತಂಡದ ಮೊತವನ್ನು ಹಿಗ್ಗಿಸಿದರು.

ಆರ್ ಸಿಬಿ ಬ್ಯಾಟಿಂಗ್
IPL 2024: 'ದೈತ್ಯ' ಕ್ರಿಸ್ ಗೇಯ್ಲ್ ದಾಖಲೆ ಮುರಿದ RCB ರನ್ ಮೆಷಿನ್ ವಿರಾಟ್ ಕೊಹ್ಲಿ!

ಮಧ್ಯಮ ಕ್ರಮಾಂಕದಲ್ಲಿ ಕ್ಯಾಮೆರಾನ್ ಗ್ರೀನ್ (33), ಗ್ಲೇನ್ ಮ್ಯಾಕ್ಸ್ ವೆಲ್ (28 ರನ್) ತಂಡಕ್ಕೆ ಒಂದಷ್ಟು ರನ್ ಗಳನ್ನು ತಂದುಕೊಟ್ಟರಾದರೂ ಅವರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲ್ಲಿಲ್ಲ. ನಾಯಕ ಮತ್ತು ಆರಂಭಿಕ ಆಟಗಾರ ಫಾಫ್ ಡುಪ್ಲೆಸಿಸ್ ಕೇವಲ 8 ರನ್ ಗಳಿಗೆ ನಿರ್ಗಮಿಸುವ ಮೂಲಕ ನಿರಾಶೆ ಮೂಡಿಸಿದರು. ರಜತ್ ಪಾಟೀದಾರ್ (3 ರನ್) ಮತ್ತು ಅನುಜ್ ರಾವತ್ (3 ರನ್) ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.

ಆದರೆ ಅಂತಿಮ ಹಂತದಲ್ಲಿ ಪ್ರೇಕ್ಷಕರಿಗೆ ದಿನೇಶ್ ಕಾರ್ತಿಕ್ ಮತ್ತು ವಿರಾಟ್ ಕೊಹ್ಲಿ ರನ್ ಗಳ ರಸದೌತಣ ಉಣಬಡಿಸಿದರು. ದಿನೇಶ್ ಕಾರ್ತಿಕ್ ಕೇವಲ 8 ಎಸೆತಗಳಲ್ಲಿ 3 ಸಿಕ್ಸರ್ ಗಳ ನೆರವಿನಿಂದ 20 ರನ್ ಪೇರಿಸಿದರೆ, ಕೊಹ್ಲಿ ಕೂಡ ಸಿಕ್ಸರ್ ಬೌಂಡರಿಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಆ ಮೂಲಕ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 183 ರನ್ ಗಳ ಬೃಹತ್ ಗುರಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com