
ನವದೆಹಲಿ: ಕಳೆದ ವರ್ಷ ಓವಲ್ ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಭಾರತವನ್ನು ಸೋಲಿಸಿದ ಆಸ್ಟ್ರೇಲಿಯಾ, ಐಸಿಸಿ ಪುರುಷರ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದೆ. ಇದೀಗ 124 ಅಂಕಗಳೊಂದಿಗೆ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಕೇವಲ 4 ಅಂಕ ಕುಸಿತದೊಂದಿಗೆ ಭಾರತ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ. 2020-21ರಲ್ಲಿ ಆಸ್ಟ್ರೇಲಿಯಾ 2-1 ಅಂತರದಿಂದ ಟೆಸ್ಟ್ ಸರಣಿ ಗೆದಿದ್ದರಿಂದ ಭಾರತ ಎರಡನೇ ಸ್ಥಾನಕ್ಕೆ ಕುಸಿಯಲು ಪ್ರಮುಖ ಕಾರಣವಾಗಿದೆ.
ಆದಾಗ್ಯೂ, ಭಾರತ ಏಕದಿನ ಹಾಗೂ ಟಿ-20 ಅಂತಾರಾಷ್ಟ್ರೀಯ ಪಂದ್ಯಗಳ ರ‍್ಯಾಂಕಿಂಗ್‌ನಲ್ಲಿ ನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತರೂ ಮೂರರಿಂದ ಆರು ಪಾಯಿಂಟ್ ಹೆಚ್ಚಳದೊಂದಿಗೆ 122 ಪಾಯಿಂಟ್ ಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಟಾಪ್ 10 ರಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ಐರ್ಲೆಂಡ್ ಜಿಂಬಾಬ್ವೆಯನ್ನು ಹಿಂದಿಕ್ಕಿದ್ದು, 11 ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ ಮೂರು, ಇಂಗ್ಲೆಂಡ್ ನಾಲ್ಕು ಹಾಗೂ ಶ್ರೀಲಂಕಾ ಐದನೇ ಸ್ಥಾನದಲ್ಲಿದೆ.
ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 264 ರೇಟಿಂಗ್ ಪಾಯಿಂಟ್ ಗಳೊಂದಿಗೆ ಭಾರತ ಅಗ್ರಸ್ಥಾನದಲ್ಲಿದೆ. ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಿ ಆಸ್ಟ್ರೇಲಿಯಾ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಈ ಎರಡೂ ತಂಡಗಳು ಭಾರತ ತಂಡಕ್ಕಿಂತ 7 ಅಂಕಗಳ ವ್ಯತ್ಯಾಸವನ್ನು ಹೊಂದಿವೆ. ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ತಂಡವಿದ್ದರೆ, ನಂತರದ ಸ್ಥಾನಗಳಲ್ಲಿ ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ತಂಡಗಳಿವೆ. ಇನ್ನು ಪಾಕಿಸ್ತಾನ ತಂಡ ಎರಡು ಸ್ಥಾನಗಳಲ್ಲಿ ಕುಸಿತ ಕಂಡು ಏಳನೇ ಸ್ಥಾನಕ್ಕೆ ಇಳಿದಿದೆ. ಸ್ಕಾಟ್ಲೆಂಡ್ ತಂಡ ಜಿಂಬಾಬ್ವೆಯನ್ನು ಹಿಂದಿಕ್ಕಿ 12ನೇ ಸ್ಥಾನಕ್ಕೇರಿದೆ.
Advertisement